ಟ್ಯೂಷನ್ ನಿಂದ ಬರುತ್ತಿದ್ದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಟ್ಯೂಷನ್ ಮುಗಿಸಿಕೊಂಡು ಮನೆಯತ್ತ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯೋರ್ವಳನ್ನು ಕಾಮುಕರು ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿದ್ದು, ಘಟನೆಯಿಂದ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Published: 03rd April 2021 11:31 AM  |   Last Updated: 03rd April 2021 04:32 PM   |  A+A-


gang rape

ಸಂಗ್ರಹ ಚಿತ್ರ

Posted By : Srinivasamurthy VN
Source : PTI

ಮೀರುತ್: ಟ್ಯೂಷನ್ ಮುಗಿಸಿಕೊಂಡು ಮನೆಯತ್ತ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯೋರ್ವಳನ್ನು ಕಾಮುಕರು ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿದ್ದು, ಘಟನೆಯಿಂದ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಉತ್ತರ ಪ್ರದೇಶದ ಮೀರುತ್ ನಲ್ಲಿ ಈ ಘಟನೆ ನಡೆದಿದ್ದು, ಟ್ಯೂಷನ್ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು 4 ಜನರ ದುಷ್ಕರ್ಮಿಗಳ ತಂಡ ಮಾರ್ಗ ಮಧ್ಯೆಯೇ ಅಪಹರಣ ಮಾಡಿದೆ. ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿ ಪರಾರಿಯಾಗಿದ್ದಾರೆ. 

ಬಳಿಕ ಮನೆಗೆ ಆಗಮಿಸಿದ ವಿದ್ಯಾರ್ಥಿನಿ ಘಟನೆಯ ಕುರಿತು ತನ್ನ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ತನ್ನ ರೂಮಿಗೆ ತೆರಳಿದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಇದನ್ನು ಗಮನಿಸಿದ ಪೋಷಕರು ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದರಾದರೂ ಚಿಕಿತ್ಸೆ ಫಲಕಾರಿಯಾಗದೇ ಆಕೆ  ಸಾವನ್ನಪ್ಪಿದ್ದಾಳೆ. ಆತ್ಮಹತ್ಯೆ ಯತ್ನಕ್ಕೂ ಮುನ್ನ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿದ್ದು, ಅದರಲ್ಲಿ ತನ್ನ ನೆರೆಯ ಗ್ರಾಮದ ಲಖನ್ ಮತ್ತು ವಿಕಾಸ್ ಮತ್ತು ಇತರೆ ಇಬ್ಬರು ಸೇರಿ ನನ್ನನ್ನು ಬಲಾತ್ಕರಿಸಿದರು ಎಂದು ಹೇಳಿದ್ದಾಳೆ.

ಈ ಡೆತ್ ನೋಟ್ ಆಧಾರವಾಗಿಟ್ಟುಕೊಂಡು ಪೊಲೀಸರು ಲಖನ್ ಮತ್ತು ವಿಕಾಸ್ ನನ್ನು ಬಂಧಿಸಿದ್ದಾರೆ. ಮತ್ತೆ ಇಬ್ಬರು ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ. 

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp