ಉಜ್ಜಯಿನಿ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ಅನಾಹುತ! 62 ಕೋವಿಡ್ ರೋಗಿಗಳು ಸೇರಿದಂತೆ 80 ಜನರ ರಕ್ಷಣೆ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಬೃಹತ್ ಅಗ್ನಿ ಅವಘಡದಲ್ಲಿ ಬೆಂಕಿಯಲ್ಲಿ ಸಿಲುಕಿದ್ದ 62 ಕೋವಿಡ್ -19 ರೋಗಿಗಳು ಸೇರಿದಂತೆ 80 ರೋಗಿಗಳನ್ನು ಅಗ್ನಿಶಾಮಕ ಮತ್ತು ರಕ್ಷಣಾ ದಳ ಮತ್ತು ಪೊಲೀಸ್ ಸಿಬ್ಬಂದಿಗಳು ರಕ್ಷಿಸಿದ್ದಾರೆ.

Published: 04th April 2021 10:17 PM  |   Last Updated: 04th April 2021 10:17 PM   |  A+A-


ಸಂಗ್ರಹ ಚಿತ್ರ

Posted By : Raghavendra Adiga
Source : The New Indian Express

ಭೋಪಾಲ್: ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಬೃಹತ್ ಅಗ್ನಿ ಅವಘಡದಲ್ಲಿ ಬೆಂಕಿಯಲ್ಲಿ ಸಿಲುಕಿದ್ದ 62 ಕೋವಿಡ್ -19 ರೋಗಿಗಳು ಸೇರಿದಂತೆ 80 ರೋಗಿಗಳನ್ನು ಅಗ್ನಿಶಾಮಕ ಮತ್ತು ರಕ್ಷಣಾ ದಳ ಮತ್ತು ಪೊಲೀಸ್ ಸಿಬ್ಬಂದಿಗಳು ರಕ್ಷಿಸಿದ್ದಾರೆ.

ಅವರಲ್ಲಿ ನಾಲ್ವರು (ಅವರೆಲ್ಲರೂ ಆಮ್ಲಜನಕದ ಬೆಂಬಲದ ಚಿಕಿತ್ಸೆಯಲ್ಲಿರುವ ಕೋವಿಡ್ ರೋಗಿಗಳು) ಸುಟ್ಟ ಗಾಯಗಳನ್ನು ಅನುಭವಿಸಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಗುರುನಾನಕ್ ಆಸ್ಪತ್ರೆಗೆ ಸಾಗಿಸಲಾಗಿದೆ. "ಅವರಲ್ಲಿ ಇಬ್ಬರು ಅಪಾಯದಿಂದ ದೂರವಾಗಿದ್ದಾರೆ ಇನ್ನೂ ಇಬ್ಬರು 75 ರಿಂದ 85 ವರ್ಷ ವಯಸ್ಸಿನ ವೃದ್ಧ ಮಹಿಳೆಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಇಂದೋರ್‌ಗೆ ಸ್ಥಳಾಂತರಿಸಲಾಗಿದೆ" ಎಂದು ಉಜ್ಜಯಿನಿ ಜಿಲ್ಲಾ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (ಸಿಎಮ್‌ಹೆಚ್‌ಒ) ಡಾ ಮಹಾವೀರ್ ಖಂಡೇಲ್ವಾಲ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.

ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಮತ್ತು ಎರಡನೇ ಮಹಡಿಗೆ ಸಹ ಹರಡಿದೆ ಎಂದು ಉಜ್ಜಯಿನಿಹೆಚ್ಚುವರಿ ಎಸ್ಪಿ (ಎಎಸ್ಪಿ) ಅಮರೇಂದ್ರ ಸಿಂಗ್ ಹೇಳಿದ್ದಾರೆ."15-20 ನಿಮಿಷಗಳಲ್ಲಿ, 62 ಕೋವಿಡ್ -19 ರೋಗಿಗಳು ಸೇರಿದಂತೆ ಆಸ್ಪತ್ರೆಯ ಎಲ್ಲಾ 80 ರೋಗಿಗಳನ್ನು ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಆಸ್ಪತ್ರೆಯಿಂದ ಜೀವಂತವಾಗಿ ರಕ್ಷಿಸಿದ್ದಾರೆ" ಎಂದು ಸಿಂಗ್ ಹೇಳಿದರು. ಘಟನೆಯ ತನಿಖೆಗಾಗಿ ಪೊಲೀಸ್, ಅಗ್ನಿಶಾಮಕ ಸೇವೆಗಳು ಮತ್ತು ಪುರಸಭೆಯ ಜಂಟಿ ತಂಡವನ್ನು ರಚಿಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp