ಛತ್ತೀಸ್ಗಢ ಎನ್ಕೌಂಟರ್: ಹುತಾತ್ಮ ಯೋಧರ ಸಂಖ್ಯೆ 8ಕ್ಕೆ ಏರಿಕೆ, 21 ಮಂದಿ ನಾಪತ್ತೆ

ಛತ್ತೀಸ್ಗಢದ ಸುಕ್ಮಾದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಹುತಾತ್ಮರಾದ ಯೋಧರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

Published: 04th April 2021 12:10 PM  |   Last Updated: 04th April 2021 12:10 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ರಾಯ್ಪುರ: ಛತ್ತೀಸ್ಗಢದ ಸುಕ್ಮಾದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಹುತಾತ್ಮರಾದ ಯೋಧರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

ಟರ್ರೆಮ್ ಅರಣ್ಯ ಪ್ರದೇಶದಲ್ಲಿ ನಕ್ಸಲರ ಇರುವಿಕೆ ಕುರಿತು ಮಾಹಿತಿ ಕಲೆಹಾಕಿದ್ದ ನಕ್ಸಲ್ ನಿಗ್ರಹ ಪಡೆ ಸಿಆರ್ ಪಿಎಫ್ ನೊಂದಿಗೆ ಶನಿವಾರ ಜಂಟಿ ಕಾರ್ಯಾಚರಣೆಗೆ ಇಳಿದಿತ್ತು.

ಸಿಆರ್ ಪಿಎಫ್ ನ ಕೋಬ್ರಾ ತಂಡ ಮತ್ತು ಜಿಲ್ಲಾ ಮೀಸಲು ಸಶಸ್ತ್ರಪಡೆ ಜಂಟಿ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ನಕ್ಸಲರ ಅಡಗುತಾಣದ ಮೇಲೆಭದ್ರತಾ ಪಡೆ ನುಗ್ಗುತ್ತಲೇ ಎಚ್ಚೆತ್ತ ನಕ್ಸಲರು ಗುಂಡಿನ ಸುರಿಮಳೆ ಗರೆದರು. 

ಬಳಿಕ ಭದ್ರತಾಪಡೆಗಳು ಹಾಗೂ ನಕ್ಸಲರ ನಡುವೆ ಭಾರೀ ಗುಂಡಿನ ಕಾಳಗ ನಡೆದಿತ್ತು. ಈ ವೇಳೆ ಐವರು ಯೋಧರು ಹುತಾತ್ಮರಾಗಿದ್ದರು. ಅಲ್ಲದೆ, 23ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಬಳಿಕ ಗಾಯಗೊಂಡಿದ್ದ ಯೋಧರನ್ನು ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿತ್ತು. ಇದೀಗ ಮತ್ತೆ ಮೂವರು ಯೋಧರು ಹುತಾತ್ಮರಾಗಿದ್ದು, ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. 

ಎನ್ಕೌಂಟರ್ ಬಳಿಕ ಹಲವು ಯೋಧರು ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿತ್ತು. ಇದೀಗ ಘಟನಾ ಸ್ಥಳಕ್ಕೆ ಸಿಆರ್'ಪಿಎಫ್ ಡಿಜಿ ಕುಲ್ದೀಪ್ ಸಿಂಗ್ ಅವರು ಭೇಟಿ ನೀಡಿದ್ದು, ಈ ವೇಳೆ 21 ಮಂದಿ ಯೋಧರು ನಾಪತ್ತೆಯಾಗಿದ್ದಾರೆಂದು ದೃಢಪಡಿಸಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp