ಕೋವಿಡ್ ಲಸಿಕೆ ಅಭಿಯಾನ:  ಆರೋಗ್ಯ ವಲಯ-ಮುಂಚೂಣಿ ಕಾರ್ಯಕರ್ತರಿಗೆ ಹೊಸ ದಾಖಲಾತಿಗೆ ಅವಕಾಶವಿಲ್ಲ: ಕೇಂದ್ರ ಸರ್ಕಾರ 

ಆರೋಗ್ಯ ವಲಯ ಕಾರ್ಯಕರ್ತರು(HCW) ಮತ್ತು ಮುಂಚೂಣಿ ಕಾರ್ಯಕರ್ತರಿಗೆ(FLW)ಕೊರೋನಾ ಲಸಿಕೆ ಹಾಕಿಸಿಕೊಳ್ಳಲು ಹೊಸ ದಾಖಲಾತಿಯನ್ನು ಮಾಡಿಕೊಳ್ಳದಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ಹೊರಡಿಸಿದೆ.

Published: 04th April 2021 09:19 AM  |   Last Updated: 04th April 2021 11:48 AM   |  A+A-


A woman gets a photograph after being administered the COVISHIELD vaccine for COVID-19 at a vaccination centre in Dharavi, Mumbai.

ಲಸಿಕೆ ಪಡೆಯುತ್ತಿರುವ ಮಹಿಳೆಯರು

Posted By : Sumana Upadhyaya
Source : PTI

ನವದೆಹಲಿ: ಆರೋಗ್ಯ ವಲಯ ಕಾರ್ಯಕರ್ತರು(HCW) ಮತ್ತು ಮುಂಚೂಣಿ ಕಾರ್ಯಕರ್ತರಿಗೆ(FLW)ಕೊರೋನಾ ಲಸಿಕೆ ಹಾಕಿಸಿಕೊಳ್ಳಲು ಹೊಸ ದಾಖಲಾತಿಯನ್ನು ಮಾಡಿಕೊಳ್ಳದಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶ ಹೊರಡಿಸಿದೆ.

ಕೆಲವು ಆರೋಗ್ಯ ವಲಯ ಮತ್ತು ಮುಂಚೂಣಿ ವಲಯಗಳಲ್ಲಿ ಕೆಲಸ ಮಾಡುವವರು ಅನರ್ಹ ಫಲಾನುಭವಿಗಳಾಗಿದ್ದು ನಿಯಮ ಉಲ್ಲಂಘಿಸಿ ಕೋವಿಡ್-19 ಲಸಿಕೆ ಹಾಕಿಸಿಕೊಳ್ಳಲು ನೋಂದಣಿ ಮಾಡಿಸಿಕೊಳ್ಳುತ್ತಾರೆ ಎಂದು ಕಂಡುಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಆದೇಶ ಹೊರಡಿಸಿದೆ.

ಈ ಬಗ್ಗೆ ಪತ್ರ ಹೊರಡಿಸಿರುವ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್, 45 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಕೋವಿನ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು. ಈಗಾಗಲೇ ನೋಂದಾಯಿಸಿಕೊಂಡಿರುವ ಎಲ್ಲಾ ಆರೋಗ್ಯ ವಲಯ ಮತ್ತು ಕೋವಿಡ್ ಮುಂಚೂಣಿ ವಲಯದಲ್ಲಿ ಕೆಲಸ ಮಾಡುತ್ತಿರುವವರಿಗೆ ಆದಷ್ಟು ಶೀಘ್ರದಲ್ಲಿ ಕೋವಿಡ್ ಲಸಿಕೆ ನೀಡುವ ವ್ಯವಸ್ಥೆ ಮಾಡಿ ಎಲ್ಲಾ ರಾಜ್ಯ ಸರ್ಕಾರಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತಿಳಿಸಿದ್ದಾರೆ.

ಈ ವರ್ಷ ಜನವರಿ 16ರಂದು ದೇಶಾದ್ಯಂತ ಕೊರೋನಾ ವಿರುದ್ಧ ಲಸಿಕೆ ಅಭಿಯಾನ ಆರಂಭಗೊಂಡಿತ್ತು. ಆರಂಭದಲ್ಲಿ ಆರೋಗ್ಯ ಸೇವೆ ವಲಯದಲ್ಲಿ ಕೆಲಸ ಮಾಡುವವರಿಗೆ ನೀಡಲಾಗಿತ್ತು. ನಂತರ ಫೆಬ್ರವರಿ 2ರಂದು ಕೋವಿಡ್ ಮುಂಚೂಣಿ ವಲಯದಲ್ಲಿ ಕೆಲಸ ಮಾಡುವ ಕಾರ್ಯಕರ್ತರಿಗೆ ಕೊರೋನಾ ಲಸಿಕೆ ನೀಡಲಾಗಿತ್ತು.

ಮುಂದಿನ ಹಂತದ ಕೊರೋನಾ ಲಸಿಕೆ ನೀಡುವ ಅಭಿಯಾನ ಮಾರ್ಚ್ 1ರಂದು ಆರಂಭವಾಗಿ 60 ವರ್ಷಕ್ಕೆ ಮೇಲ್ಪಟ್ಟ ಮತ್ತು ಯಾವುದಾದರೂ ಆರೋಗ್ಯ ಸಮಸ್ಯೆ ಇರುವ 45 ವರ್ಷಕ್ಕೆ ಮೇಲ್ಪಟ್ಟ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕೆಂದು ಕೇಂದ್ರ ಸರ್ಕಾರ ಕಡ್ಡಾಯ ಮಾಡಿತು. 

ನಿನ್ನೆ ಬರೆದ ಪತ್ರದಲ್ಲಿ ರಾಜೇಶ್ ಭೂಷಣ್, ಅರ್ಹ ಆರೋಗ್ಯ ವಲಯ ಮತ್ತು ಮುಂಚೂಣಿ ವಲಯಗಳಲ್ಲಿ ಕೆಲಸ ಮಾಡುವವರಿಗೆ ಕ್ಷಿಪ್ರವಾಗಿ ಲಸಿಕೆ ನೀಡುವ ಕೆಲಸವನ್ನು ಮಾಡಲಾಗುತ್ತಿದೆ. ಕೆಲವು ಕೋವಿಡ್ -19 ಕೇಂದ್ರಗಳಲ್ಲಿ ಕೆಲವು ಅನರ್ಹ ಫಲಾನುಭವಿಗಳನ್ನು  ಆರೋಗ್ಯ ವಲಯ ಕಾರ್ಯಕರ್ತರು ಮತ್ತು ಮುಂಚೂಣಿ ವಲಯ ಕಾರ್ಯಕರ್ತರೆಂದು ನೋಂದಾಯಿಸಲಾಗುತ್ತಿದೆ, ಸರ್ಕಾರದ ನಿಗದಿತ ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಲಸಿಕೆ ಪಡೆಯಲಾಗುತ್ತಿದೆ ಎಂದು ವಿವಿಧ ಮೂಲಗಳಿಂದ ಆರೋಪ ಕೇಳಿಬಂದಿದೆ ಎಂದರು.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp