ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ದಾಖಲೆ, ಒಂದೇ 49,447 ಹೊಸ ಸೋಂಕು ಪ್ರಕರಣ ದಾಖಲು

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲೆಯ ಮತ್ತೆ 49 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ದಾಖಲಾಗಿದೆ.

Published: 04th April 2021 12:18 PM  |   Last Updated: 04th April 2021 12:18 PM   |  A+A-


Maharashtra-COVID-19

ಸಂಗ್ರಹ ಚಿತ್ರ

Posted By : Srinivasamurthy VN
Source : ANI

ಮುಂಬೈ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲೆಯ ಮತ್ತೆ 49 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ದಾಖಲಾಗಿದ್ದು, ಇದು ಕೊರೋನಾ ವೈರಸ್ ಸಾಂಕ್ರಾಮಿಕ ಆರಂಭವಾದಾಗಿನಿಂದ ದಾಖಲಾದ  ದೈನಂದಿನ ದಾಖಲೆಯ ಗರಿಷ್ಠ ಪ್ರಮಾಣವಾಗಿದೆ.

ಈ ಬಗ್ಗೆ ಮಹಾರಾಷ್ಟ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 49,447 ಸೋಂಕು ಪ್ರಕರಣಗಳು ವರದಿಯಾಗಿದೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,53,523ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು 277 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ  ಮೂಲಕ ಈ ವರೆಗೂ ಕೋವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 55,656ಕ್ಕೆ ಏರಿಕೆಯಾಗಿದೆ.

ಕಳೆದ 2020ರ ಸೆಪ್ಟೆಂಬರ್ 17ರಂದು ಮಹಾರಾಷ್ಟ್ರದಲ್ಲಿ 24,619 ಸೋಂಕು ಪ್ರಕರಣಗಳು ವರದಿಯಾಗಿತ್ತು. ಇದು ಅಂದಿನ ಸಮಯಕ್ಕೆ ಗರಿಷ್ಠ ಪ್ರಮಾಣ ಎಂದು ಹೇಳಲಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಈ ದಾಖಲೆಗಳನ್ನೂ ಮೀರಿಸುವಂತೆ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ 37,821 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಕೋವಿಡ್-19 ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 24,95,315ಕ್ಕೇರಿಕೆಯಾಗಿದ್ದು, ಪ್ರಸ್ತುತ ಮಹಾರಾಷ್ಟ್ರದಲ್ಲಿ 4,01,172 ಸಕ್ರಿಯ ಪ್ರಕರಣಗಳಿವೆ.

ಮುಂಬೈನಲ್ಲಿ ದಾಖಲೆಯ 9,108 ಹೊಸ ಸೋಂಕು ಪ್ರಕರಣಗಳು ಪತ್ತೆ
ಇನ್ನು ಮಹಾರಾಷ್ಟ್ರ ಮತ್ತು ದೇಶದ ವಾಣಿಜ್ಯ ರಾಜಧಾನಿ ಎಂದೇ ಕರೆಯಲಾಗುವ ಮುಂಬೈನಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ ದಾಖಲೆ ಬರೆದಿದ್ದು, ಇಂದು ಒಂದೇ ದಿನ 9,108 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇದು ಈ ವರೆಗೆ ದಾಖಲಾದ ಒಂದು ದಿನದ ಗರಿಷ್ಠ ಸೋಂಕು ಪ್ರಕರಣವಾಗಿದೆ.  ಮುಂಬೈನಲ್ಲಿ ಪ್ರಸ್ತುತ ಒಟ್ಟಾರೆ ಸೋಂಕಿತರ ಸಂಖ್ಯೆ 4,41,282ಕ್ಕೆ ಏರಿಕೆಯಾಗಿದ್ದು, ಈ ಪೈಕಿ 3,66,365 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಅಂತೆಯೇ 11,751 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಪ್ರಸ್ತುತ ಮುಂಬೈನಲ್ಲಿ 62,187 ಸಕ್ರಿಯ ಪ್ರಕರಣಗಳಿವೆ ಎಂದು ಬಿಎಂಸಿ ಮಾಹಿತಿ ನೀಡಿದೆ. 

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp