ಛತ್ತೀಸ್ ಘಡ ನಕ್ಸಲರ ದಾಳಿ: ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಿದ ರಾಷ್ಟ್ರಪತಿ ಕೋವಿಂದ್, ರಾಜನಾಥ್ ಸಿಂಗ್
ಛತ್ತೀಸ್ ಘಡದಲ್ಲಿ ನಡೆದ ನಕ್ಸಲರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದಾರೆ.
Published: 04th April 2021 03:03 PM | Last Updated: 04th April 2021 03:03 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಛತ್ತೀಸ್ ಘಡದಲ್ಲಿ ನಡೆದ ನಕ್ಸಲರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದಾರೆ.
'ಯೋಧರು ಅತ್ಯಂತ ಧೈರ್ಯದಿಂದ ಹೋರಾಡಿದ್ದಾರೆ. ಅವರ ತ್ಯಾಗವನ್ನು ದೇಶ ಎಂದಿಗೂ ಮರೆಯಲಾಗುವುದಿಲ್ಲ. ಅವರ ಕುಟುಂಬಗಳಿಗೆ ನಾನು ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ಕೋವಿಂದ್, ಛತ್ತೀಸ್ ಘಢದಲ್ಲಿ ಮಾವೋವಾದಿಗಳ ವಿರುದ್ಧ ಹೋರಾಡುತ್ತಿರುವ ಸಂದರ್ಭದಲ್ಲಿ ಭದ್ರತಾ ಪಡೆಗಳು ಹುತಾತ್ಮರಾಗಿದ್ದಾರೆ. ಇದು ಅತ್ಯಂತ ದುಃಖಕರ ವಿಚಾರವಾಗಿದೆ. ಯೋಧರ ಕುಟುಂಬಸ್ಥರಿಗೆ ಸಂತಾಪ ಸೂಚಿಸುತ್ತೇನೆ. ಇಡೀ ದೇಶ ಅವರ ನೋವನ್ನು ಹಂಚಿಕೊಳ್ಳಲಿದೆ. ಯೋಧರ ತ್ಯಾಗವನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.
ಮಾವೋಪೀಡಿತ ಬಸ್ತಾರ್ ಪ್ರದೇಶದ ಬಿಜಾಪುರ್ ಅರಣ್ಯ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆ ಮತ್ತು ನಕ್ಸಲರ ಮಧ್ಯೆ ಭಾರೀ ಗುಂಡಿನ ಕಾಳಗ ನಡೆದಿತ್ತು. ನಕ್ಸಲರ ದಾಳಿಯಲ್ಲಿ 22 ಮಂದಿ ಯೋಧರು ಹುತಾತ್ಮರಾಗಿದ್ದು, 30ಕ್ಕೂ ಹೆಚ್ಚು ಮಂದಿ ಭದ್ರತಾ ಪಡೆಗಳು ಗಾಯಗೊಂಡಿದ್ದಾರೆ.