ಛತ್ತೀಸ್ಗಢ: ನಕ್ಸಲರ ಅಟ್ಟಹಾಸಕ್ಕೆ 22 ಯೋಧರು ಹುತಾತ್ಮ, ರಾಷ್ಟ್ರಪತಿ ಕೋವಿಂದ್ ತೀವ್ರ ಸಂತಾಪ
ಮಾವೋಪೀಡಿತ ಬಸ್ತಾರ್ ಪ್ರದೇಶದ ಬಿಜಾಪುರ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ನಡೆಸಿದ ಭೀಕರ ದಾಳಿಯಲ್ಲಿ 22 ಮಂದಿ ಯೋಧರು ಹುತಾತ್ಮರಾಗಿದ್ದು, ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾನುವಾರ ತೀವ್ರ ಸಂತಾಪ ಸೂಚಿಸಿದ್ದಾರೆ.
Published: 04th April 2021 01:44 PM | Last Updated: 04th April 2021 01:44 PM | A+A A-

ರಾಷ್ಟ್ರಪತಿ ರಾಮನಾಥ್ ಕೋವಿಂದ್
ನವದೆಹಲಿ: ಮಾವೋಪೀಡಿತ ಬಸ್ತಾರ್ ಪ್ರದೇಶದ ಬಿಜಾಪುರ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ನಡೆಸಿದ ಭೀಕರ ದಾಳಿಯಲ್ಲಿ 22 ಮಂದಿ ಯೋಧರು ಹುತಾತ್ಮರಾಗಿದ್ದು, ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾನುವಾರ ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಛತ್ತೀಸ್ಗಢದಲ್ಲಿ ಮಾವೋವಾದಿಗಳ ವಿರುದ್ಧ ಹೋರಾಡುತ್ತಿರುವ ಸಂದರ್ಭದಲ್ಲಿ ಭದ್ರತಾ ಪಡೆಗಳು ಹುತಾತ್ಮರಾಗಿದ್ದಾರೆ. ಇದು ಅತ್ಯಂತ ದುಃಖಕರ ವಿಚಾರವಾಗಿದೆ. ಯೋಧರ ಕುಟುಂಬಸ್ಥರಿಗೆ ಸಂತಾಪ ಸೂಚಿಸುತ್ತೇನೆ. ಇಡೀ ದೇಶ ಅವರ ನೋವನ್ನು ಹಂಚಿಕೊಳ್ಳಲಿದೆ. ಯೋಧರ ತ್ಯಾಗವನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.
The killing of the security personnel while battling Maoist insurgency in Chhattisgarh is a matter of deep anguish. My condolences to the bereaved families. The nation shares their pain and will never forget this sacrifice.
— President of India (@rashtrapatibhvn) April 4, 2021
ಮಾವೋಪೀಡಿತ ಬಸ್ತಾರ್ ಪ್ರದೇಶದ ಬಿಜಾಪುರ್ ಅರಣ್ಯ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆ ಮತ್ತು ನಕ್ಸಲರ ಮಧ್ಯೆ ಭಾರೀ ಗುಂಡಿನ ಕಾಳಗ ನಡೆದಿತ್ತು. ನಕ್ಸಲರ ದಾಳಿಯಲ್ಲಿ 22 ಮಂದಿ ಯೋಧರು ಹುತಾತ್ಮರಾಗಿದ್ದು, 30ಕ್ಕೂ ಹೆಚ್ಚು ಮಂದಿ ಭದ್ರತಾ ಪಡೆಗಳು ಗಾಯಗೊಂಡಿದ್ದಾರೆ.