ಕೊರೋನಾ 2ನೇ ಡೋಸ್ ಲಸಿಕೆ ಪಡೆದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಭಾನುವಾರ ಕೊರೋನಾ ಎರಡನೇ ಡೋಸ್ ಲಸಿಕೆಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಪಡೆದುಕೊಂಡಿದ್ದಾರೆ. 

Published: 04th April 2021 12:23 PM  |   Last Updated: 04th April 2021 12:23 PM   |  A+A-


Venkaiah Naidu takes second dose of COVID-19 vaccine

ಲಸಿಕೆ ಪಡೆಯುತ್ತಿರುವ ಉಪ ರಾಷ್ಟ್ರಪತಿ

Posted By : Manjula VN
Source : Online Desk

ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಭಾನುವಾರ ಕೊರೋನಾ ಎರಡನೇ ಡೋಸ್ ಲಸಿಕೆಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಪಡೆದುಕೊಂಡಿದ್ದಾರೆ. 

2020ರ ಸೆಪ್ಟೆಂಬರ್ನಲ್ಲಿ ವೆಂಕಯ್ಯ ನಾಯ್ಡು ಕೊರೊನಾ ಸೋಂಕಿಗೀಡಾಗಿದ್ದರು. ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮಾರ್ಚ್ 1ರಂದು ಅವರು ಚೆನ್ನೈನಲ್ಲಿ ಮೊದಲ ಲಸಿಕೆ ಡೋಸ್ ಪಡೆದುಕೊಂಡಿದ್ದರು. ಇದೀಗ ದೆಹಲಿಯ ಏಮ್ಸ್ ನಲ್ಲಿ 2ನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. 

ಲಸಿಕೆ ಪಡೆದುಕೊಂಡ ಬಳಿಕ ಮಾತನಾಡಿರುವ ವೆಂಕಯ್ಯ ನಾಯ್ಡು ಅವರು, ಎಲ್ಲರೂ ಲಸಿಕೆ ಪಡೆಯುವಂತೆ ಮನವಿ ಮಾಡಿದ್ದಾರೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 7,59,79,651 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp