ಐದಾರು ತಿಂಗಳುಗಳಲ್ಲಿ ಸರ್ಕಾರ ನಮ್ಮ ಬೇಡಿಕೆ ಒಪ್ಪಿಕೊಳ್ಳುವ ಭರವಸೆಯಿದೆ-ರಾಕೇಶ್ ಟಿಕಾಯತ್

ಮುಂದಿನ ಐದಾರು ತಿಂಗಳುಗಳಲ್ಲಿ ಸರ್ಕಾರ ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳುವ ವಿಶ್ವಾಸವಿದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ರಾಕೇಶ್ ಟಿಕಾಯತ್ ಭಾನುವಾರ ಹೇಳಿದ್ದಾರೆ.

Published: 04th April 2021 02:03 PM  |   Last Updated: 04th April 2021 02:03 PM   |  A+A-


Rakesh_Tikait1

ರಾಕೇಶ್ ಟಿಕಾಯತ್

Posted By : Nagaraja AB
Source : Online Desk

ರಾಜಸ್ಥಾನ: ಮುಂದಿನ ಐದಾರು ತಿಂಗಳುಗಳಲ್ಲಿ ಸರ್ಕಾರ ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳುವ ವಿಶ್ವಾಸವಿದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ರಾಕೇಶ್ ಟಿಕಾಯತ್ ಭಾನುವಾರ ಹೇಳಿದ್ದಾರೆ.

ಕೃಷಿ ಕಾಯ್ದೆಗಳ ವಿರುದ್ಧ ವಿವಿಧ ರಾಜ್ಯಗಳಲ್ಲಿ ಸಮಾವೇಶಗಳನ್ನು ನಡೆಸುತ್ತಿರುವ ರಾಕೇಶ್ ಟಿಕಾಯತ್ ಇಂದು ರಾಜಸ್ಥಾನದ ಅಬು ರೋಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸುವ ವಿಶ್ವಾಸ ಹೊಂದಿರುವುದಾಗಿ ತಿಳಿಸಿದರು.

ಗುಜರಾತ್ ಗೂ ಭೇಟಿ ನೀಡಿ, ಕೃಷಿ ಕಾನೂನುಗಳು ಮತ್ತು ಕನಿಷ್ಠ ಬೆಂಬಲ ಬೆಲೆ ಬಗ್ಗೆ ಅಲ್ಲಿನ ರೈತರೊಂದಿಗೆ ಮಾತನಾಡುವುದಾಗಿ  ಹೇಳಿದ ಟಿಕಾಯತ್, ಬರ್ಡೋಲಿ ಮತ್ತು ಸಬರಮತಿಗೂ ತೆರಳಿ, ರೈತರೊಂದಿಗೆ ಚರ್ಚಿಸುವುದಾಗಿ ಹೇಳಿದರು.ಟ

ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಕಳೆದ ನಾಲ್ಕು ತಿಂಗಳಿನಿಂದ ದೆಹಲಿ- ಉತ್ತರ ಪ್ರದೇಶದ ಗಾಜಿಪುರ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಟಿಕಾಯತ್ ಹಾಗೂ ಅವರ ಬೆಂಬಲಿಗರು ವಿವಿಧ ರಾಜ್ಯಗಳಿಗೆ ಪ್ರವಾಸ ಕೈಗೊಂಡು ರೈತರನ್ನು ಸಂಘಟಿಸುವ ಕೆಲಸ ಮಾಡುತ್ತಿದ್ದಾರೆ.
 

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp