ತಮಿಳುನಾಡು: ಹಣ ಹಂಚಿಕೆ ಆರೋಪ, ಐದು ಕ್ಷೇತ್ರಗಳಲ್ಲಿ ಚುನಾವಣೆ ರದ್ಧತಿಗೆ ಆಯೋಗಕ್ಕೆ ಎಐಎಡಿಎಂಕೆ ಒತ್ತಾಯ!

ತೀವ್ರ ಕುತೂಹಲ ಕೆರಳಿಸಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇರುವಂತೆಯೇ, ಐದು ಕ್ಷೇತ್ರಗಳಲ್ಲಿ ಚುನಾವಣೆ ರದ್ದುಪಡಿಸುವಂತೆ ಆಯೋಗಕ್ಕೆ ಆಡಳಿತಾರೂಢ ಎಐಎಡಿಎಂಕೆ ಒತ್ತಾಯಿಸಿದೆ. 

Published: 05th April 2021 05:19 PM  |   Last Updated: 05th April 2021 06:38 PM   |  A+A-


CM_Palaniswamy_Stalin1

ಮುಖ್ಯಮಂತ್ರಿ ಪಳನಿಸ್ವಾಮಿ, ಸ್ಟಾಲಿನ್

Posted By : Nagaraja AB
Source : Online Desk

ಚೆನ್ನೈ: ತೀವ್ರ ಕುತೂಹಲ ಕೆರಳಿಸಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇರುವಂತೆಯೇ, ಐದು ಕ್ಷೇತ್ರಗಳಲ್ಲಿ ಚುನಾವಣೆ ರದ್ದುಪಡಿಸುವಂತೆ ಆಯೋಗಕ್ಕೆ ಆಡಳಿತಾರೂಢ ಎಐಎಡಿಎಂಕೆ ಒತ್ತಾಯಿಸಿದೆ. 

ಹಣ ಹಂಚಿಕೆಯಂತಹ ದುಷ್ಕೃತ್ಯದಿಂದಾಗಿ ಕೋಲಥೂರ್, ಚೆಪಾಕ್, ಕಟ್ಪಾಡಿ, ತಿರುವಣ್ಣಾಮಲೈ ಮತ್ತು ತಿರುಚ್ಚಿ ಪಶ್ಚಿಮ ಕ್ಷೇತ್ರಗಳಲ್ಲಿ ಚುನಾವಣೆಯನ್ನು ರದ್ದುಪಡಿಸುವಂತೆ ಎಐಎಡಿಎಂಕೆ ಸೋಮವಾರ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ನಾಳೆ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಚುನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿ ಎಐಎಡಿಎಂಕೆ ಮತ್ತು ಡಿಎಂಕೆ ನಡುವಣ ತೀವ್ರ ಹಣಾಹಣಿ ಏರ್ಪಟ್ಟಿದೆ. ಎಐಎಡಿಎಂಕೆ ಹ್ಯಾಟ್ರಿಕ್ ಗೆಲುವು ಸಾಧಿಸಲು ಹವಣಿಸುತ್ತಿದ್ದರೆ 10 ವರ್ಷದ ನಂತರ ಅಧಿಕಾರಕ್ಕೆ ಬರಲು ಡಿಎಂಕೆ ಕಸರತ್ತು ನಡೆಸುತ್ತಿದೆ. ನಾಳೆ ಈ ಎರಡು ಪಕ್ಷಗಳ ಅಭ್ಯರ್ಥಿಗಳ ಹಣೆಬರಹವನ್ನು ಮತದಾರರು ನಿರ್ಧರಿಸಲಿದ್ದಾರೆ.

ಕೇರಳದ ಕೋಝಿಕೋಡ್ ನಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ರೋಡ್ ಶೋ ನಡೆಸಿ ಮತದಾರರ ಮನಗೆಲ್ಲಲು ಪ್ರಯತ್ನಿಸಿದರು. ಈ ಮಧ್ಯೆ, ಬಂಗಾಳದಲ್ಲಿ ಗೆಲುವು ಸಾಧಿಸುವುದಾಗಿ ಹೇಳಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿಯವರಿಗೆ ಸ್ಥಳೀಯರ ಬೆಂಬಲವಿಲ್ಲ, ಎಲ್ಲರನ್ನು ಟಿಎಂಸಿ ಅಥವಾ ಸಿಪಿಎಂನಿಂದ ಖರೀದಿಸಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. 


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp