ಕೇರಳ, ತಮಿಳುನಾಡು, ಪುದುಚೇರಿ ವಿಧಾನಸಭೆಗೆ ನಾಳೆ ಮತದಾನ

ಸುಡು ಬಿಲಿಸಿಲಿನ ಬೇಗೆಯ ನಡುವೆ ದಕ್ಷಿಣ ಭಾರತದ ಎರಡು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಭಾನುವಾರ ತೆರೆಬಿದ್ದಿದ್ದು, ನಾಳೆ ಕೇರಳ, ತಮಿಳುನಾಡು, ಪುದುಚೇರಿ ವಿಧಾನಸಭೆಗೆ ಒಂದೇ...

Published: 05th April 2021 07:02 PM  |   Last Updated: 05th April 2021 07:02 PM   |  A+A-


Karnataka ByPoll: Voting Begins

ಸಾಂದರ್ಭಿಕ ಚಿತ್ರ

Posted By : Lingaraj Badiger
Source : UNI

ನವದೆಹಲಿ: ಸುಡು ಬಿಲಿಸಿಲಿನ ಬೇಗೆಯ ನಡುವೆ ದಕ್ಷಿಣ ಭಾರತದ ಎರಡು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಭಾನುವಾರ ತೆರೆಬಿದ್ದಿದ್ದು, ನಾಳೆ ಕೇರಳ, ತಮಿಳುನಾಡು, ಪುದುಚೇರಿ ವಿಧಾನಸಭೆಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಸಾವಿರಾರು ಅಭ್ಯರ್ಥಿಗಳ ಹಣೆ ಬರಹ ತೀರ್ಮಾನವಾಗಲಿದೆ.

ಪಶ್ಚಿಮ ಬಂಗಾಳದಲ್ಲಿ ಮಂಗಳವಾರ 3ನೇ ಹಂತ ಮತ್ತು ಅಸ್ಸಾಂ ಕೊನೆಯ ಹಂತದ ಮತದಾನಕ್ಕೆ ಸಾಕ್ಷಿಯಾಗಲಿದ್ದು, ಅಲ್ಲೂ ಪ್ರಚಾರಕ್ಕೆ ತೆರೆ ಬಿದ್ದಿದೆ.

ತಮಿಳುನಾಡಿನಲ್ಲಿ ಆಡಳಿತಾರೂಢ ಎಐಎಡಿಎಂಕೆ ಹ್ಯಾಟ್ರಿಕ್ ಗೆಲುವಿನ ಕನಸು ಕಾಣುತ್ತಿದ್ದರೆ, ಪ್ರತಿಪಕ್ಷ ಡಿಎಂಕೆ ಅಧಿಕಾರದ ಚುಕ್ಕಾಣಿ ಹಿಡಿಯಲು ಶ್ರಮಿಸುತ್ತಿದೆ. ಜಯಲಲಿತಾ ಮತ್ತು ಕರುಣಾನಿಧಿಯಂಥ ದಿಗ್ಗಜ ನಾಯಕರ ಅನುಪಸ್ಥಿತಿಯಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಎರಡೂ ಪಕ್ಷಗಳಿಗೆ ಅಗ್ನಿಪರೀಕ್ಷೆಯಾಗಿದೆ.

234 ಸದಸ್ಯ ಬಲ ಹೊಂದಿರುವ ತಮಿಳುನಾಡು ವಿಧಾನಸಭೆಗೆ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp