ನಕ್ಸಲರ ಉಪಟಳ ಕೊನೆಗೊಳಿಸಲು ಕೇಂದ್ರ ಬದ್ಧ: ಗೃಹ ಸಚಿವ ಅಮಿತ್ ಶಾ

ಕೇಂದ್ರ ಸರ್ಕಾರ ನಕ್ಸಲರ ಉಪಟಳವನ್ನು ಕೊನೆಗೊಳಿಸಲು ಮಾವೋವಾದಿಗಳ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಹೇಳಿದ್ದಾರೆ.

Published: 05th April 2021 03:57 PM  |   Last Updated: 05th April 2021 06:40 PM   |  A+A-


amith-chr

ಅಮಿತ್ ಶಾ

Posted By : Lingaraj Badiger
Source : PTI

ರಾಯ್‌ಪುರ: ಕೇಂದ್ರ ಸರ್ಕಾರ ನಕ್ಸಲರ ಉಪಟಳವನ್ನು ಕೊನೆಗೊಳಿಸಲು ಮಾವೋವಾದಿಗಳ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಹೇಳಿದ್ದಾರೆ.

ಛತ್ತೀಸ್‌ಗಡದ ಬಸ್ತಾರ್ ಪ್ರದೇಶದಲ್ಲಿ ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ 22 ಭದ್ರತಾ ಸಿಬ್ಬಂದಿಗೆ ಅಮಿತ್ ಶಾ ಇಂದು ಗೌರವ ನಮನ ಸಲ್ಲಿಸಿದರು. ಬಳಿಕ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಗೃಹ ಸಚಿವರು, ನಕ್ಸಲರ ವಿರುದ್ಧದ ಹೋರಾಟವನ್ನು "ನಿರ್ಣಾಯಕ ಹಂತ"ಕ್ಕೆ ತೆಗೆದುಕೊಂಡು ಹೋಗಲಾಗುವುದು ಮತ್ತು ಭದ್ರತಾ ಸಿಬ್ಬಂದಿಯ ತ್ಯಾಗವನ್ನು ಸದಾ ನೆನಪಿಸಿಕೊಳ್ಳಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಯ ಗಡಿಭಾಗಗಳಾದ ಜೊನಗುಡ ಮತ್ತು ಟೆಕಲ್‌ಗುಡ ಹಳ್ಳಿಗಳಲ್ಲಿ ನಡೆದ ನಕ್ಸಲ್ ದಾಳಿಯಲ್ಲಿ 22 ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, 31 ಸಿಬ್ಬಂದಿ ಗಾಯಗೊಂಡಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp