ಕೋವಿಡ್-19 ಕೇಸ್ ಹೆಚ್ಚಳ: ಕರ್ನಾಟಕ ಸೇರಿ ವಿವಿಧ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ನಾಳೆ ಕೇಂದ್ರ ಆರೋಗ್ಯ ಸಚಿವರ ಸಭೆ

ಕೋವಿಡ್-19 ಪ್ರಕರಣಗಳು ಹೆಚ್ಚಿರುವ 11 ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರೊಂದಿಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ನಾಳೆ ಸಭೆ ನಡೆಸಲಿದ್ದಾರೆ.

Published: 05th April 2021 07:13 PM  |   Last Updated: 05th April 2021 07:58 PM   |  A+A-


Harshavardhan1

ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್

Posted By : Nagaraja AB
Source : PTI

ನವದೆಹಲಿ: ಕೋವಿಡ್-19 ಪ್ರಕರಣಗಳು ಹೆಚ್ಚಿರುವ 11 ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ  ಆರೋಗ್ಯ ಸಚಿವರೊಂದಿಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ನಾಳೆ ಸಭೆ ನಡೆಸಲಿದ್ದಾರೆ.

ಮಹಾರಾಷ್ಟ್ರ, ಛತ್ತೀಸ್ ಗಢ, ದೆಹಲಿ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಪಂಜಾಬ್ ಮತ್ತು ರಾಜಸ್ಥಾನದ  ಆರೋಗ್ಯ ಸಚಿವರೊಂದಿಗೆ ಕೋವಿಡ್ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲಿದ್ದಾರೆ. 

ಆರೋಗ್ಯ ಸಚಿವಾಲಯದ ಪ್ರಕಾರ, ಮಹಾರಾಷ್ಟ್ರ, ಛತ್ತೀಸ್ ಗಢ, ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ಮಧ್ಯಪ್ರದೇಶ ಮತ್ತು ಪಂಜಾಬ್ ನಲ್ಲಿ ದೈನಂದಿನ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರಗತಿಯ ಏರಿಕೆಯಾಗುತ್ತಿದೆ. 

ಮಹಾರಾಷ್ಟ್ರದಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆ 57, 074ರಷ್ಟಿದೆ. ಇದು ದೇಶಾದ್ಯಂತ ವರದಿಯಾದ ಹೊಸ ಪ್ರಕರಣಗಳಲ್ಲಿ ಶೇ. 55. 11ರಷ್ಟಾಗಿದೆ. ಕರ್ನಾಟಕದಲ್ಲಿ ಇಂದು 5279 ಹೊಸ ಪ್ರಕರಣಗಳು ಪತ್ತೆಯಾಗಿವೆ.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp