ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ: ಬಿಜೆಪಿ

ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ ಅವರು ರಾಜೀನಾಮೆ ಸಲ್ಲಿಸಿದ ಕೆಲವೇ ಗಂಟೆಗಳ ನಂತರ ಮಹಾರಾಷ್ಟ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ಮತ್ತು ಕೇಂದ್ರ ಸಚಿವ...

Published: 05th April 2021 08:34 PM  |   Last Updated: 05th April 2021 08:34 PM   |  A+A-


Ravi Shankar Prasad

ರವಿಶಂಕರ್ ಪ್ರಸಾದ್

Posted By : Lingaraj Badiger
Source : ANI

ನವದೆಹಲಿ: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ ಅವರು ರಾಜೀನಾಮೆ ಸಲ್ಲಿಸಿದ ಕೆಲವೇ ಗಂಟೆಗಳ ನಂತರ ಮಹಾರಾಷ್ಟ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ಮತ್ತು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ ಎಂದು ಸೋಮವಾರ ಹೇಳಿದ್ದಾರೆ.

ದೇಶಮುಖ್ ಅವರು ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ. ಆದರೆ ಸಿಎಂ ಅವರ ಜವಾಬ್ದಾರಿ ಏನು? ನಿಮಗೆ ನೈತಿಕತೆ ಎಲ್ಲಿದೆ? ಉದ್ಧವ್ ಠಾಕ್ರೆ ಅವರು ಆಡಳಿತ ನಡೆಸುವ ನೈತಿಕ ಜವಾಬ್ದಾರಿಯನ್ನು ಕಳೆದುಕೊಂಡಿದ್ದಾರೆ" ಎಂದು ಪ್ರಸಾದ್ ವಾಗ್ದಾಳಿ ನಡೆಸಿದರು.

ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರವಿಶಂಕರ್ ಪ್ರಸಾದ್, "ಯಾವಾಗಲೂ ತನ್ನನ್ನು ತಾನು ಸಮರ್ಥಿಸಿಕೊಂಡಿದ್ದ ನಿಮ್ಮ ಮಂತ್ರಿ ಇಂದು ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಿದ್ದಾರೆ. ಆದರೆ ನಿಮ್ಮ ನೈತಿಕತೆ ಎಲ್ಲಿದೆ" ಎಂದು ಪ್ರಶ್ನಿಸಿದರು. 

ಅನಿಲ್ ದೇಶಮುಖ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಬಗ್ಗೆ ನಿಮ್ಮ ಮೌನವೇಕೆ? ಉದ್ಧವ್ ಠಾಕ್ರೆ ಅವರು ಮೌನಕ್ಕೆ ಶರಣಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕುತ್ತಿದೆ ಎಂದು ಕೇಂದ್ರ ಸಚಿವ ಹೇಳಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp