ಕಾಶ್ಮೀರದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಕಮಾಂಡರ್ ಬಂಧನ, ಬಯಲಾಯ್ತು ಉಗ್ರರ ಭಾರಿ ಸಂಚು!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಸಂಘಟನೆ ತನ್ನ ಬೇರೂರಲು ಸತತಯತ್ನ ಮಾಡುತ್ತಿದ್ದು, ಇದಕ್ಕೆ ಇಂಬು ನೀಡುವಂತೆ ಕಾಶ್ಮೀರದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಕಮಾಂಡರ್ ಬಂಧಿಸಲಾಗಿದೆ.
Published: 05th April 2021 10:18 AM | Last Updated: 05th April 2021 10:18 AM | A+A A-

ಭಯೋತ್ಪಾದಕ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಸಂಘಟನೆ ತನ್ನ ಬೇರೂರಲು ಸತತಯತ್ನ ಮಾಡುತ್ತಿದ್ದು, ಇದಕ್ಕೆ ಇಂಬು ನೀಡುವಂತೆ ಕಾಶ್ಮೀರದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಕಮಾಂಡರ್ ಬಂಧಿಸಲಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಸಂಚು ರೂಪಿಸಿದ್ದ ಇಸ್ಲಾಮಿಕ್ ಸ್ಟೇಟ್ (ಐಎಸ್) ಉಗ್ರ ಸಂಘಟನೆಯ ಕಮಾಂಡರ್ನನ್ನು ಭಾನುವಾರ ಬಂಧಿಸಲಾಗಿದೆ ಎಂದು ಜಮ್ಮು ವಲಯದ ಪೊಲೀಸ್ ಮುಖ್ಯಸ್ಥ ಮುಖೇಶ್ ಸಿಂಗ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 'ಕುಲ್ಗಾಮ್ ನ ಝಜ್ಜರ್ ಕೋಟ್ಲಿಯಲ್ಲಿ ಓರ್ವ ವ್ಯಕ್ತಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ. ಇದನ್ನು ಗಮನಿಸಿದ ಸೇನಾಪಡೆಗಳು ಕೂಡಲೇ ಆತನನ್ನು ಹಿಡಿದು ವಿಚಾರಿಸಿದಾಗ ಆತ ಇಸ್ಲಾಮಿಕ್ ಸ್ಟೇಟ್ ಆಫ್ ಜಮ್ಮು ಮತ್ತು ಕಾಶ್ಮೀರ ಉಗ್ರ ಸಂಘಟನೆಯ ಉಗ್ರ ಎಂದು ತಿಳಿದುಬಂದಿದೆ. ಕೂಡಲೇ ಆತನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಆತ ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಯಾರಿಪೋರಾ ಗ್ರಾಮದ ನಿವಾಸಿ ಉಮೈರ್ ಅಲಿಯಾಸ್ ಅಬ್ದುಲ್ಲಾ ಎಂದು ತಿಳಿದುಬಂದಿದೆ. ಈತ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಗೆ ಸೇರಿದವನಾಗಿದ್ದು, ಸಂಘಟನೆಯ ಕಾಶ್ಮೀರ ಪ್ರಾಂತ್ಯದ ಕಮಾಂಡರ್ ಆಗಿ ನೇಮಕಗೊಂಡಿದ್ದನು ಎಂದು ತಿಳಿಸಿದ್ದಾರೆ.
ಇನ್ನು ಬಂಧಿತ ಉಗ್ರನಿಂದ ಶಸ್ತ್ರಾಸ್ತ್ರ ಸೇರಿದಂತೆ 1.13 ಲಕ್ಷ ರೂ ಹಣವನ್ನು ವಶಪಡಿಸಿಕೊಳ್ಳಾಗಿದೆ. ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಉಗ್ರನು ಸಂಚು ರೂಪಿಸಿದ್ದನೆಂದು ತಿಳಿದುಬಂದಿದೆ. ಅಲ್ಲದೆ ಆತ ಉಗ್ರ ಕ್ಯಾಂಪ್ ಗಳಿಗೆ ಹಣ ಮತ್ತು ಶಸ್ತ್ರಾಸ್ತ್ರಗಳನ್ನು ರವಾನಿಸಿರುವುದಾಗಿಯೂ ಮಾಹಿತಿ ನೀಡಿದ್ದಾನೆ ಎಂದು ಹೇಳಲಾಗಿದೆ.