ನಕ್ಸಲರ ವಿರುದ್ಧ ಬೃಹತ್ ಕಾರ್ಯಾಚರಣೆಗೆ ಸಜ್ಜಾಗಿ: ಯೋಧರಿಗೆ ಅಮಿತ್ ಶಾ ಕರೆ

ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ... ನಕ್ಸಲರ ವಿರುದ್ಧ ಬೃಹತ್ ಕಾರ್ಯಾಚರಣೆಗೆ ಸಜ್ಜಾಗಿ ಎಂದು ಭಾರತೀಯ ಸೇನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ.

Published: 05th April 2021 08:09 AM  |   Last Updated: 05th April 2021 08:09 AM   |  A+A-


Amit Shah

ಅಮಿತ್ ಶಾ

Posted By : Srinivasamurthy VN
Source : ANI

ನವದೆಹಲಿ: ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ... ನಕ್ಸಲರ ವಿರುದ್ಧ ಬೃಹತ್ ಕಾರ್ಯಾಚರಣೆಗೆ ಸಜ್ಜಾಗಿ ಎಂದು ಭಾರತೀಯ ಸೇನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ.

ಛತ್ತೀಸ್ ಘಡದಲ್ಲಿ ನಡೆದ ನಕ್ಸಲರ ದಾಳಿ ಘಟನೆ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಪರಿಸ್ಥಿತಿಯನ್ನು ಅವಲೋಕಿಸಿತು. ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್‌ ಭಲ್ಲಾ, ಗುಪ್ತದಳ ವಿಭಾಗದ ನಿರ್ದೇಶಕ ಅರವಿಂದ ಕುಮಾರ್‌ ಸೇರಿದಂತೆ ಸಚಿವಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಮಿತ್ ಶಾ ಅವರು, ನಮ್ಮ ಯೋಧರು, ಭದ್ರತಾ ಸಿಬ್ಬಂದಿ ಜೀವ ಕಳೆದುಕೊಂಡಿದ್ದಾರೆ. ಛತ್ತೀಸ್ ಘಡದಲ್ಲಿ ನಕ್ಸಲರ ದಾಳಿಗೆ ತಕ್ಕ ಪ್ರತ್ಯುತ್ತರವನ್ನು ಸಕಾಲದಲ್ಲಿ ನೀಡಲಿದ್ದೇವೆ ಎಂದು ಹೇಳಿದ್ದಾರೆ.

ಅಂತೆಯೇ ಮಾವೋವಾದಿಗಳ ವಿರುದ್ಧ ಹೋರಾಟದಲ್ಲಿ  ಹುತಾತ್ಮರಾದ ನಮ್ಮ ಕೆಚ್ಚೆದೆಯ ಭದ್ರತಾ ಸಿಬ್ಬಂದಿಯ ತ್ಯಾಗಕ್ಕೆ ನಾನು ತಲೆಬಾಗುತ್ತೇನೆ. ರಾಷ್ಟ್ರವು ಅವರ ಶೌರ್ಯವನ್ನು ಎಂದಿಗೂ ಮರೆಯುವುದಿಲ್ಲ. ಮೃತ ಯೋಧರ ಕುಟುಂಬಗಳಿಗೆ ದೇವರು ಸಾವಿನ ನೋವು ತಡೆಯುವ ಶಕ್ತಿ ನೀಡಲಿ. ಶಾಂತಿ ಮತ್ತು ಪ್ರಗತಿಗೆ ವಿರುದ್ಧವಾಗಿರುವ ಈ ಶತ್ರುಗಳ ವಿರುದ್ಧ ನಾವು ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಪ್ರಚಾರ ಮೊಟಕು ಗೊಳಿಸಿ ದೆಹಲಿಗೆ ದೌಡಾಯಿಸಿದ ಶಾ
ಅಸ್ಸಾಂನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಅಮಿತ್ ಶಾ, ಯೋಧರ ಸಾವಿನ ಸುದ್ದಿ ಕೇಳುತ್ತಲೇ ಪ್ರಚಾರವನ್ನು ಅರ್ಧಕ್ಕೆ ಬಿಟ್ಟು ದೆಹಲಿಗೆ ತೆರಳಿದ್ದಾರೆ. ದೆಹಲಿಗೆ ಹೊರಡುವುದಕ್ಕೂ ಮೊದಲು ಅಸ್ಸಾಂನ ಸೌಲ್​ಕುಂಚಿ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ ನಿಖರವಾಗಿ ಇನ್ನೂ ಗೊತ್ತಿಲ್ಲ. ಆದರೆ ಯೋಧರನ್ನು ಹತ್ಯೆ ಮಾಡಿದ ನಕ್ಸಲರಿಗೆ, ಸೂಕ್ತ ಸಮಯದಲ್ಲಿ ಕಟು ಉತ್ತರ ನೀಡಲಾಗುವುದು ಎಂದು ಹೇಳಿದ್ದಾರೆ. ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಪ್ರಾಣ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ಕುಟುಂಬಕ್ಕೆ ಭರವಸೆ ನೀಡುತ್ತೇನೆ ಎಂದಿದ್ದಾರೆ.

ಅಸ್ಸಾನಿಂದ ದೆಹಲಿಗೆ ಹೋದ ಅಮಿತ್​ ಶಾ, ಚತ್ತೀಸ್​ಗಡ್​​ನ ಉನ್ನತ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ, ಸ್ಥಳದಲ್ಲಿರುವ ಪರಿಸ್ಥಿತಿಯ ಬಗ್ಗೆ ವರದಿ ಪಡೆದಿದ್ದಾರೆ.
 

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp