ದೇಶ್ ಮುಖ್ ಕುರಿತು ಬಾಂಬೆ ಹೈಕೋರ್ಟ್ ತೀರ್ಪು ಅಭ್ಯಸಿಸಿದ ನಂತರ ಮಹಾರಾಷ್ಟ್ರ ಸರ್ಕಾರ ಪ್ರತಿಕ್ರಿಯೆ- ಸಂಜಯ್ ರಾವತ್

ಮಾಜಿ ಸಚಿವ ಅನಿಲ್ ದೇಶ್ ಮುಖ್  ಅವರ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ  ಆದೇಶಿಸಿರುವ ಬಾಂಬೆ ಹೈಕೋರ್ಟ್ ತೀರ್ಪುನ್ನು ಅಭ್ಯಸಿಸಿದ ನಂತರ ಮಹಾರಾಷ್ಟ್ರ ಸರ್ಕಾರ ಪ್ರತಿಕ್ರಿಯಿಸುವುದಾಗಿ ಶಿವಸೇನಾ ಮುಖಂಡ ಸಂಜಯ್ ರಾವತ್ ಸೋಮವಾರ ತಿಳಿಸಿದ್ದಾರೆ.

Published: 05th April 2021 08:10 PM  |   Last Updated: 05th April 2021 08:15 PM   |  A+A-


Shiv_Sena_MP_Sanjay_Raut1

ಶಿವಸೇನಾ ಮುಖಂಡ ಸಂಜಯ್ ರಾವತ್

Posted By : Nagaraja AB
Source : The New Indian Express

ಮುಂಬೈ: ಮಾಜಿ ಸಚಿವ ಅನಿಲ್ ದೇಶ್ ಮುಖ್  ಅವರ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ  ಆದೇಶಿಸಿರುವ ಬಾಂಬೆ ಹೈಕೋರ್ಟ್ ತೀರ್ಪುನ್ನು ಅಭ್ಯಸಿಸಿದ ನಂತರ ಮಹಾರಾಷ್ಟ್ರ ಸರ್ಕಾರ ಪ್ರತಿಕ್ರಿಯಿಸುವುದಾಗಿ ಶಿವಸೇನಾ ಮುಖಂಡ ಸಂಜಯ್ ರಾವತ್ ಸೋಮವಾರ ತಿಳಿಸಿದ್ದಾರೆ.

ಇದಕ್ಕೂ ಮುನ್ನ  ಭ್ರಷ್ಟಾಚಾರ ಮತ್ತು ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ದೇಶಮುಖ್ ವಿರುದ್ಧ ಮಾಡಿದ್ದ ಆರೋಪಗಳ ಬಗ್ಗೆ 15 ದಿನಗಳೊಳಗೆ ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ ಹೈಕೋರ್ಟ್ ನಿರ್ದೇಶಿಸಿತ್ತು.

ದೇಶ್ ಮುಖ್, ಶಿವಸೇನಾ ನೇತೃತ್ವದ ಮಹಾ ವಿಕಾಸ್ ಆಘಾದಿ ಸರ್ಕಾರದ ಪ್ರಮುಖ ಮೈತ್ರಿ ಪಕ್ಷವಾಗಿರುವ ಎನ್ ಸಿಪಿಯ ಹಿರಿಯ ಮುಖಂಡರಾಗಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಸಂಜಯ್ ರಾವತ್, ತೀರ್ಪಿನ ಬಗ್ಗೆ ಅಭ್ಯಸಿಸಿ ನಂತರ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು.

ಯಾವುದೇ ತನಿಖಾ ಸಂಸ್ಥೆ ದೇವರ ಅವತಾರವಲ್ಲ. ಈ ವಿಷಯವೂ ರಾಜಕೀಯವಾಗಿದೆ. ನ್ಯಾಯಾಂಗದ ನಿರ್ಧಾರಗಳಿಗೆ ಗೌರವ ನೀಡುತ್ತೇವೆ. ಈ ತೀರ್ಪನ್ನು ವಿವರವಾಗಿ ಅಧ್ಯಯನ ಮಾಡಬೇಕಾಗಿದೆ, ಅದರ ನಂತರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಥವಾ ಸರ್ಕಾರದ ಯಾರಾದರೂ  ಸರ್ಕಾರದ ಪರವಾಗಿ ಪ್ರತಿಕ್ರಿಯಿಸುತ್ತಾರೆ ಎಂದು ರವಾತ್ ತಿಳಿಸಿದರು. 

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp