ಪರಮ್ ಬಿರ್ ಪತ್ರ ವಿವಾದ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ರಾಜೀನಾಮೆ

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ತಮ್ಮ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಗೃಹ ಸಚಿವ...

Published: 05th April 2021 03:27 PM  |   Last Updated: 05th April 2021 03:27 PM   |  A+A-


Former Mumbai Police chief Parambir Singh (L) and Maharashtra Home Minister Anil Deshmukh

ಪರಮ್ ಬಿರ್ ಸಿಂಗ್ ಮತ್ತು ಅನಿಲ್ ದೇಶ್ ಮುಖ್

Posted By : Lingaraj Badiger
Source : The New Indian Express

ಮುಂಬೈ: ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ತಮ್ಮ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರು ಸೋಮವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅನಿಲ್ ದೇಶಮುಖ್ ಅವರು ಇಂದು ಬೆಳಗ್ಗೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದರು ಮತ್ತು  ದೇಶಮುಖ್ ಅವರು ತಮ್ಮ ರಾಜೀನಾಮೆಯನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರವಾನಿಸಿದ್ದಾರೆ ಎಂದು ಎನ್ ಸಿಪಿ ಸಚಿವ ನವಾಬ್ ಮಲಿಕ್ ಅವರು ತಿಳಿಸಿದ್ದಾರೆ.

ಅನಿಲ್ ದೇಶ್ ಮುಖ್ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಪಟ್ಟಂತೆ 15 ದಿನಗಳೊಳಗೆ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಸಿಬಿಐಗೆ ಆದೇಶ ನೀಡಿದೆ.

ಮುಂಬೈ ನಗರ ಪೊಲೀಸ್‌ ಆಯುಕ್ತ ಹುದ್ದೆಯಿಂದ ವರ್ಗಾಯಿಸಿದ ನಂತರ, ಪರಮ್ ಬೀರ್ ಸಿಂಗ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದು, ಎನ್‌ಸಿಪಿ ಹಿರಿಯ ಮುಖಂಡ, ದೇಶಮುಖ್, ಮುಂಬೈನ ಬಾರ್ ಮತ್ತು ಹೋಟೆಲ್‌ಗಳಿಂದ ಮಾಸಿಕ 100 ಕೋಟಿ ರೂ. ಸಂಗ್ರಹಿಸುವಂತೆ ಸಚಿನ್ ವಾಜೆ ಮತ್ತು ಇತರ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದರು ಎಂದು ಆರೋಪಿಸಿದ್ದರು.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp