ಅನಿಲ್ ದೇಶ್ ಮುಖ್ V/S ಪರಮ್ ಬಿರ್ ಸಿಂಗ್: 15 ದಿನಗಳೊಳಗೆ ಪ್ರಾಥಮಿಕ ತನಿಖೆ ನಡೆಸಲು ಸಿಬಿಐಗೆ ಮುಂಬೈ ಹೈಕೋರ್ಟ್ ಆದೇಶ 

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಮಾಡಿದ್ದ ಭ್ರಷ್ಟಾಚಾರ ಮತ್ತು ಅವ್ಯವಹಾರ ಆರೋಪಕ್ಕೆ ಸಂಬಂಧಪಟ್ಟಂತೆ 15 ದಿನಗಳೊಳಗೆ ಪ್ರಾಥಮಿಕ ತನಿಖೆ ನಡೆಸುವಂತೆ ಮುಂಬೈ ಹೈಕೋರ್ಟ್ ಸೋಮವಾರ ಸಿಬಿಐಗೆ ಆದೇಶ ನೀಡಿದೆ.

Published: 05th April 2021 12:42 PM  |   Last Updated: 05th April 2021 01:33 PM   |  A+A-


Former Mumbai Police chief Parambir Singh (L) and Maharashtra Home Minister Anil Deshmukh

ಪರಮ್ ಬಿರ್ ಸಿಂಗ್ ಮತ್ತು ಅನಿಲ್ ದೇಶ್ ಮುಖ್

Posted By : Sumana Upadhyaya
Source : PTI

ಮುಂಬೈ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಮಾಡಿದ್ದ ಭ್ರಷ್ಟಾಚಾರ ಮತ್ತು ಅವ್ಯವಹಾರ ಆರೋಪಕ್ಕೆ ಸಂಬಂಧಪಟ್ಟಂತೆ 15 ದಿನಗಳೊಳಗೆ ಪ್ರಾಥಮಿಕ ತನಿಖೆ ನಡೆಸುವಂತೆ ಮುಂಬೈ ಹೈಕೋರ್ಟ್ ಸೋಮವಾರ ಸಿಬಿಐಗೆ ಆದೇಶ ನೀಡಿದೆ.

ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಗಿರೀಶ್ ಕುಲಕರ್ಣಿ ನೇತೃತ್ವದ ವಿಭಾಗೀಯ ಪೀಠ, ಇದೊಂದು ಅಪರೂಪದ ಪ್ರಕರಣವಾಗಿದ್ದು ಇದಕ್ಕೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ಹೇಳಿತು.

ನಂತರ ಸಿಬಿಐ ನಿರ್ದೇಶಕರಿಗೆ ಆದೇಶ ನೀಡಿ ಪ್ರಾಥಮಿಕ ತನಿಖೆಯನ್ನು 15 ದಿನಗಳೊಳಗೆ ಮಾಡಿ ಮುಗಿಸಿ ಮುಂದಿನ ಕ್ರಮಕ್ಕೆ ನಿರ್ಧಾರ ಕೈಗೊಳ್ಳುವಂತೆ ಆದೇಶ ಹೊರಡಿಸಿತು.

ಪರಮ್ ಬಿರ್ ಸಿಂಗ್ ಸೇರಿದಂತೆ ನಗರ ಮೂಲದ ವಕೀಲೆ ಜಯಶ್ರೀ ಪಾಟೀಲ್ ಮತ್ತು ಶಿಕ್ಷಕ ಮೋಹನ್ ಭಿಡೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಭಾಗೀಯ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ. 

ಮಾರ್ಚ್ 25 ರಂದು, ಅನಿಲ್ ದೇಶ್ ಮುಖ್  ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಪರಮ್ ಬಿರ್ ಸಿಂಗ್ ಕ್ರಿಮಿನಲ್ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿದ್ದರು. ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್ ವೇಜ್ ಸೇರಿದಂತೆ ಪೊಲೀಸ್ ಅಧಿಕಾರಿಗಳನ್ನು ಬಾರ್ ಮತ್ತು ರೆಸ್ಟೋರೆಂಟ್ ಗಳಿಂದ 100 ಕೋಟಿ ರೂಪಾಯಿ ಲಂಚ ಸಂಗ್ರಹಿಸುವಂತೆ ಅನಿಲ್ ದೇಶ್ ಮುಖ್ ಆದೇಶಿಸಿದ್ದರು ಎಂಬುದು ಅವರ ಆರೋಪವಾಗಿದೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp