ಏ. 8 ರಂದು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ, ಕೊರೋನಾ ಹೆಚ್ಚಳ, ವ್ಯಾಕ್ಸಿನೇಷನ್ ಕುರಿತು ಚರ್ಚೆ
ದೇಶದಲ್ಲಿ ಮತ್ತೆ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದು, ಕೋವಿಡ್ ಪರಿಸ್ಥಿತಿ ಮತ್ತು ಲಸಿಕೆ ಅಭಿಯಾನದ...
Published: 05th April 2021 07:58 PM | Last Updated: 05th April 2021 07:58 PM | A+A A-

ಪ್ರಧಾನ ಮಂತ್ರಿ ನರೇಂದ್ರ ಮೋದಿ
ನವದೆಹಲಿ: ದೇಶದಲ್ಲಿ ಮತ್ತೆ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದು, ಕೋವಿಡ್ ಪರಿಸ್ಥಿತಿ ಮತ್ತು ಲಸಿಕೆ ಅಭಿಯಾನದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಸೋಮವಾರ ಮೂಲಗಳು ತಿಳಿಸಿವೆ.
ಏಪ್ರಿಲ್ 8 ರಂದು ಸಂಜೆ 6: 30ಕ್ಕೆ ಪ್ರಧಾನಿ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿ ಕಳೆದ ಮಾರ್ಚ್ 17 ರಂದು ಮುಖ್ಯಮಂತ್ರಿಗಳೊಂದಿಗೆ ಕೊನೆಯ ಸಂವಾದ ನಡೆಸಿದ್ದರು. ಈ ಸಂದರ್ಭದಲ್ಲಿ ಅವರು ದೇಶದ ಕೆಲವು ಭಾಗಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಮತ್ತು ಎರಡನೇ ಅಲೆ ನಿಯಂತ್ರಿಸಲು "ತ್ವರಿತ ಮತ್ತು ನಿರ್ಣಾಯಕ" ಕ್ರಮಗಳನ್ನು ಕೈಗೊಳ್ಳಬೇಕೆಂದು ಸಲಹೆ ನೀಡಿದ್ದರು.
ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುವ ಮುನ್ನ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಮಂಗಳವಾರ 11 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.