ಕೆಂಪು ಉಗ್ರರ ವಿರುದ್ಧದ ಹೋರಾಟದಲ್ಲಿ ದೇಶ ಒಂದಾಗಿದೆ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ

ಕೆಂಪು ಉಗ್ರರ ವಿರುದ್ಧದ ಸೈನಿಕರ ಹೋರಾಟದಲ್ಲಿ ದೇಶ ಒಂದಾಗಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.

Published: 05th April 2021 08:23 AM  |   Last Updated: 05th April 2021 08:23 AM   |  A+A-


Sonia Gandhi

ಸೋನಿಯಾ ಗಾಂಧಿ

Posted By : Srinivasamurthy VN
Source : Online Desk

ನವದೆಹಲಿ: ಕೆಂಪು ಉಗ್ರರ ವಿರುದ್ಧದ ಸೈನಿಕರ ಹೋರಾಟದಲ್ಲಿ ದೇಶ ಒಂದಾಗಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.

ಛತ್ತೀಸ್ ಘಡದಲ್ಲಿ ನಡೆದ ನಕ್ಸಲರ ದಾಳಿಯಲ್ಲಿ 22 ಯೋಧರು ಬಲಿಯಾಗಿರುವ ಘಟನೆ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸೋನಿಯಾಗಾಂಧಿ ಅವರು, ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದಾರೆ. 

ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಸೋನಿಯಾಗಾಂಧಿ ಅವರು, 'ನಕ್ಸಲರ ವಿರುದ್ಧದ ಹೋರಾಟದಲ್ಲಿ ನಾವೆಲ್ಲರೂ ಒಂದಾಗಿದ್ದೇವೆ. ನಕ್ಸಲರ ವಿರುದ್ಧ ಹೋರಾಡುತ್ತಿರುವ ಅರೆಸೈನಿಕ ಪಡೆಗಳಿಗೆ ಛತ್ತೀಸಗಡದಲ್ಲಿ ಅಧಿಕಾರದಲ್ಲಿರುವ ತಮ್ಮ (ಕಾಂಗ್ರೆಸ್) ಸರಕಾರವು ಎಲ್ಲ ರೀತಿಯ ನೆರವನ್ನು ನೀಡಲಿದೆ ಎಂದು ತಿಳಿಸಿದ್ದಾರೆ.

ಅಂತೆಯೇ ಎನ್ ಕೌಂಟರ್ ನಲ್ಲಿ ಹುತಾತ್ಮರಾದ ಯೋಧರಿಗೆ ಸಂತಾಪ ಸೂಚಿಸಿರುವ ಸೋನಿಯಾ, ಮೃತ ಯೋಧರ ಕುಟುಂಬಗಳಿಗೆ ದೇವರು ಸಾವಿನ ನೋವು ತಡೆಯುವ ಶಕ್ತಿ ನೀಡಲಿ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಇಡೀ ದೇಶವೇ ಯೋಧರ ಬಲಿದಾನಕ್ಕೆ ಅಪಾರವಾದ ಕೃತಜ್ಞತೆಯನ್ನು ಹೊಂದಿದೆ ಎಂದು ಹೇಳಿದ್ದಾರೆ.

ಛತ್ತೀಸ್ ಘಡ ದ ಬಿಜಾಪುರದಲ್ಲಿ ನಡೆದ ಭೀಕರ ನಕ್ಸಲ್ ದಾಳಿಯಲ್ಲಿ 22 ಯೋಧರು ಹುತಾತ್ಮರಾಗಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp