ಕೋವಿಡ್-19: ಮೊದಲ ಡೋಸ್ ಲಸಿಕೆ ಪಡೆದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್

ಉತ್ತರ ಪ್ರದೇಶ ಮುಖ್ಯಮಂತ್ರಿ ಸಿಎಂ ಯೋಗಿ ಆದಿತ್ಯಾನಾಥ್ ಅವರು ಸೋಮವಾರ ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದರು.

Published: 05th April 2021 09:05 AM  |   Last Updated: 05th April 2021 01:02 PM   |  A+A-


Yogi Adityanath-vaccine

ಲಸಿಕೆ ಪಡೆದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್

Posted By : Srinivasamurthy VN
Source : ANI

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಸಿಎಂ ಯೋಗಿ ಆದಿತ್ಯಾನಾಥ್ ಅವರು ಸೋಮವಾರ ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದರು.

ಇಂದು ಲಖನೌನ ಸಿವಿಲ್ ಆಸ್ಪತ್ರೆಗೆ ತೆರಳಿದ ಯೋಗಿ ಆದಿತ್ಯಾನಾಥ್ ಅವರು ಮೊದಲ ಡೋಸ್ ಕೋವಿಡ್ ಲಸಿಕೆ ಪಡೆದರು. ಬಳಿಕ ಮಾತನಾಡಿದ ಅವರು, ಎಲ್ಲರೂ ಕೋವಿಡ್ ಲಸಿಕೆ ಪಡೆಯುವ ಮೂಲಕ ಕೋವಿಡ್-19 ಸೋಂಕು ನಿಯಂತ್ರಣದಲ್ಲಿ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು. ಅಲ್ಲದೆ ಲಸಿಕೆ ತೆಗೆದುಕೊಂಡ ನಂತರವೂ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕೆಂದು ನಾನು ಜನರಿಗೆ ಮನವಿ ಮಾಡುತ್ತೇನೆ. ಹೊಸ ಕೋವಿಡ್-19 ಅಲೆಯ ನಡುವೆ ಜಾವಾಬ್ದಾರಿಯುತವಾಗಿ ವರ್ತಿಸಿ ಸೋಂಕು ದೂರ ಮಾಡೋಣ ಎಂದು ಹೇಳಿದ್ದಾರೆ.

ಅಂತೆಯೇ ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿರುವ ಅವರು,  ಲಸಿಕೆ ಉಚಿತವಾಗಿ ಲಭ್ಯವಾಗುವಂತೆ ಅವಕಾಶ ಕಲ್ಪಿಸಿರುವ ಪ್ರಧಾನಿ ಮೋದಿ ಮತ್ತು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಧನ್ಯವಾದಗಳು. ದೇಶದ ವಿಜ್ಞಾನಿಗಳಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ. ಲಸಿಕೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ. ನಮ್ಮ ಸರದಿ ಬಂದಾಗ ನಾವೆಲ್ಲರೂ ಅದನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.
 

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp