ಅನಿಲ್ ದೇಶಮುಖ್ ರಾಜೀನಾಮೆ ನಂತರ ಉದ್ಧವ್ ಠಾಕ್ರೆ ಮೌನ ಪ್ರಶ್ನಿಸಿದ ದೇವೇಂದ್ರ ಫಡ್ನವಿಸ್

ಅನಿಲ್ ದೇಶಮುಖ್ ಅವರು ಸೋಮವಾರ ರಾಜ್ಯ ಗೃಹ ಸಚಿವ ಹುದ್ದೆಗೆ ರಾಜೀನಾಮೆ ನೀಡಿದರೂ ಆರೋಪದ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಮೌನವಹಿಸಿರುವುದು ಏಕೆ? ಎಂದು ಬಿಜೆಪಿ ಮುಖಂಡ ದೇವೇಂದ್ರ ಫಡ್ನವಿಸ್ ಅವರು ಪ್ರಶ್ನಿಸಿದ್ದಾರೆ.

Published: 05th April 2021 06:18 PM  |   Last Updated: 05th April 2021 06:39 PM   |  A+A-


fadnavish

ಉದ್ಧವ್ ಠಾಕ್ರೆ - ದೇವೇಂದ್ರ ಫಡ್ನವಿಸ್

Posted By : Lingaraj Badiger
Source : PTI

ಮುಂಬೈ: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಎನ್‌ಸಿಪಿ ಮುಖಂಡ ಅನಿಲ್ ದೇಶಮುಖ್ ಅವರು ಸೋಮವಾರ ರಾಜ್ಯ ಗೃಹ ಸಚಿವ ಹುದ್ದೆಗೆ ರಾಜೀನಾಮೆ ನೀಡಿದರೂ ಆರೋಪದ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಮೌನವಹಿಸಿರುವುದು ಏಕೆ? ಎಂದು ಬಿಜೆಪಿ ಮುಖಂಡ ದೇವೇಂದ್ರ ಫಡ್ನವಿಸ್ ಅವರು ಪ್ರಶ್ನಿಸಿದ್ದಾರೆ.

ಅನಿಲ್ ದೇಶಮುಖ್ ರಾಜೀನಾಮೆ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಫಡ್ನವಿಸ್ ಅವರು, ಗೃಹ ಸಚಿವರ ರಾಜೀನಾಮೆ ನಿರೀಕ್ಷಿಸಿತ. ಅವರಿಗೆ ಬೇರೆ ದಾರಿ ಇಲ್ಲ ಎಂದರು.

ಅನಿಲ್ ದೇಶಮುಖ್ ಅವರು ತಮ್ಮ ವಿರುದ್ಧ ಭ್ರಷ್ಟಾಚಾರ ಆರೋಪ ಬಂದ ಮೊದಲ ದಿನವೇ ನೈತಿಕತೆಯನ್ನು ನೆನಪಿಸಿಕೊಳ್ಳಬೇಕಿತ್ತು ಎಂದು ಬಿಜೆಪಿ ನಾಯಕ ತಿರುಗೇಟು ನೀಡಿದ್ದಾರೆ.

"ಈ ಬಗ್ಗೆ ಮುಖ್ಯಮಂತ್ರಿಗಳು ಮೌನವಾಗಿರುವುದು ಏಕೆ? ಅವರು ಮೌನ ಮುರಿಯಬೇಕು" ಎಂದು ಫಡ್ನವಿಸ್ ಹೇಳಿದ್ದಾರೆ.

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ತಮ್ಮ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರು ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp