ಭಾರತದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ 1 ಲಕ್ಷಕ್ಕೂ ಅಧಿಕ ಮಂದಿಗೆ ಕೊರೋನಾ, 478 ಮಂದಿ ಸಾವು

ಭಾರತದಲ್ಲಿ ಕೊರೋನಾ 2ನೇ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಅನೇಕ ಮಂದಿ ಗಣ್ಯ ವ್ಯಕ್ತಿಗಳಿಗೂ ಸೋಂಕು ತಗುಲುತ್ತಿದೆ.

Published: 05th April 2021 10:11 AM  |   Last Updated: 05th April 2021 01:03 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Sumana Upadhyaya
Source : ANI

ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಅನೇಕ ಮಂದಿ ಗಣ್ಯ ವ್ಯಕ್ತಿಗಳಿಗೂ ಸೋಂಕು ತಗುಲುತ್ತಿದೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1 ಲಕ್ಷದ 03 ಸಾವಿರದ 558 ಹೊಸ ಕೊರೋನಾ ಪ್ರಕರಣ ವರದಿಯಾಗಿದೆ. ಒಂದೇ ದಿನ 478 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಇದುವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ  1 ಲಕ್ಷದ 65 ಸಾವಿರದ 101ಕ್ಕೆ ಏರಿಕೆಯಾಗಿದೆ. ಈ ಮೂಲಕ ಕಳೆದ ವರ್ಷ ಸೆಪ್ಟೆಂಬರ್ 17 ರ ನಂತರ ಒಂದು ದಿನದಲ್ಲಿ ಅತಿ ಹೆಚ್ಚು ಮಂದಿ ಸೋಂಕಿತರು ವರದಿಯಾಗಿದ್ದು ನಿನ್ನೆಯೇ ಆಗಿದೆ. 

ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 1 ಕೋಟಿಯ 25 ಲಕ್ಷದ 89 ಸಾವಿರದ 067 ಪ್ರಕರಣಗಳು ವರದಿಯಾಗಿದ್ದು, ಸದ್ಯ 7 ಲಕ್ಷದ 41 ಸಾವಿರದ 830 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 52,847 ಮಂದಿ ಗುಣಮುಖರಾಗಿದ್ದು, ದೇಶದಲ್ಲಿ ಈವರೆಗು ಒಟ್ಟಾರೆ 1,16,82,136 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. 

ಸತತ 26ನೇ ದಿನ ಕೊರೋನಾ ಸೋಂಕು ಏರುತ್ತಲೇ ಇದ್ದು, ದೇಶದಲ್ಲಿ ಒಟ್ಟಾರೆ ಈವರೆಗೆ ಶೇಕಡಾ 5.89 ಸೋಂಕಿತರಿದ್ದಾರೆ. ಗುಣಮುಖ ಹೊಂದುತ್ತಿರುವವ ಸಂಖ್ಯೆ ಶೇಕಡಾ 92.80ಗೆ ಇಳಿಕೆಯಾಗಿದೆ. 

ಒಟ್ಟು ಸಕ್ರಿಯ ಕೇಸುಗಳ ಪೈಕಿ ಕಳೆದ ಫೆಬ್ರವರಿ 12ರಂದು ಈ ವರ್ಷ ಕಡಿಮೆ 1 ಲಕ್ಷದ 35 ಸಾವಿರದ 926 ಕೇಸುಗಳು ವರದಿಯಾಗಿದ್ದವು.

ಈ ಮಧ್ಯೆ ದೇಶದಲ್ಲಿ ನಿನ್ನೆ ಒಂದೇ ದಿನ 8,93,749 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 24,90,19,657 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೋವಿಡ್-19 ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 7,91,05,163 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp