ವಿಧಾನಸಭೆ ಚುನಾವಣೆ: ಅಸ್ಸಾಂನಲ್ಲಿ 53.23%, ಕೇರಳ 47.28%, ಪುದುಚೇರಿ 53.76%, ತ.ನಾಡು 39.00%, ಬಂಗಾಳದಲ್ಲಿ 53.89% ಮತದಾನ

ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಈ ವರೆಗೂ ಅಸ್ಸಾಂನಲ್ಲಿ ಶೇ.53.23, ಕೇರಳ ಶೇ.47.28, ಪುದುಚೇರಿ ಶೇ.53.76, ತಮಿಳುನಾಡು ಶೇ.39.00, ಪಶ್ಚಿಮ ಬಂಗಾಳದಲ್ಲಿ ಶೇ.53.89ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. 

Published: 06th April 2021 01:00 PM  |   Last Updated: 06th April 2021 02:15 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : ANI

ನವದೆಹಲಿ: ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಈ ವರೆಗೂ ಅಸ್ಸಾಂನಲ್ಲಿ ಶೇ.53.23, ಕೇರಳ ಶೇ.47.28, ಪುದುಚೇರಿ ಶೇ.53.76, ತಮಿಳುನಾಡು ಶೇ.39.00, ಪಶ್ಚಿಮ ಬಂಗಾಳದಲ್ಲಿ ಶೇ.53.89ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. 

ಭಾರತೀಯ ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಅಸ್ಸಾಂನಲ್ಲಿ ಶೇ.53.23, ಕೇರಳ ಶೇ.47.28, ಪುದುಚೇರಿ ಶೇ.53.76, ತಮಿಳುನಾಡು ಶೇ.39.00, ಪಶ್ಚಿಮ ಬಂಗಾಳದಲ್ಲಿ ಶೇ.53.89ರಷ್ಟು ಮತದಾನವಾಗಿದೆ ಎಂದು ಮಾಹಿತಿ ನೀಡಿದೆ,

ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿಯ 475 ಮತಕ್ಷೇತ್ರಗಳಿಗೆ ಇಂದು ಬಿಗಿಭದ್ರತೆಯಲ್ಲಿ ಮತದಾನ ನಡೆಯುತ್ತಿದೆ

ಪಶ್ಚಿಮ ಬಂಗಾಳ ಹೊರತುಪಡಿಸಿ ಉಳಿದ 4 ರಾಜ್ಯಗಳಲ್ಲಿ ಇಂದೇ ಚುನಾವಣೆ ಮುಕ್ತಾಯಗೊಳ್ಳಲಿದ್ದು, ಮೇ.2 ರಂದು ಫಲಿತಾಂಶ ಪ್ರಕಟವಾಗಲಿದೆ.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಬಗ್ಗೆ ಹೇಳುವುದಾದರೆ ಇಲ್ಲಿ 94 ವಿಧಾನಸಭಾ ಸ್ಥಾನಗಳಿಗೆ 8 ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಮಾರ್ಚ್ 27, ಏಪ್ರಿಲ್ 1ರಂದು ಮೊದಲ ಮತ್ತು ಎರಡನೇ ಹಂತದಲ್ಲಿ 30-30 ಸ್ಥಾನಗಳಲ್ಲಿ ಎರಡು ಹಂತಗಳ ಮತದಾನ ಪೂರ್ಣಗೊಂಡಿದ್ದು ಇಂದು ಮೂರನೇ ಹಂತದಲ್ಲಿ 31 ಸ್ಥಾನಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. 


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp