ಅಸ್ಥಿರತೆ ಉಂಟುಮಾಡಲು ಬಿಜೆಪಿ ವಿರೋಧಿಗಳಿಂದ ವದಂತಿ: ಬಿಜೆಪಿ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮೋದಿ

ದೇಶದಲ್ಲಿ ರಾಜಕೀಯ ಅಸ್ಥಿರತೆ ಉಂಟುಮಾಡುವುದಕ್ಕಾಗಿ ಬಿಜೆಪಿ ವಿರೋಧಿಗಳು ಸುಳ್ಳು ಮತ್ತು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

Published: 06th April 2021 03:19 PM  |   Last Updated: 06th April 2021 04:40 PM   |  A+A-


PM Narendra Modi

ಪ್ರಧಾನಿ ನರೇಂದ್ರ ಮೋದಿ

Posted By : Srinivas Rao BV
Source : IANS

ನವದೆಹಲಿ: ದೇಶದಲ್ಲಿ ರಾಜಕೀಯ ಅಸ್ಥಿರತೆ ಉಂಟುಮಾಡುವುದಕ್ಕಾಗಿ ಬಿಜೆಪಿ ವಿರೋಧಿಗಳು ಸುಳ್ಳು ಮತ್ತು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

ನವದೆಹಲಿಯಲ್ಲಿ ನಡೆದ ಬಿಜೆಪಿ ಪಕ್ಷದ 41 ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಸಿಎಎ, ಕೃಷಿ ಕಾನೂನು, ಕಾರ್ಮಿಕ ಕಾನೂನುಗಳ ಬಗ್ಗೆ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಇದು ದೇಶದಲ್ಲಿ ರಾಜಕೀಯ ಅಸ್ಥಿರತೆಯನ್ನು ಉಂಟುಮಾಡುವುದಕ್ಕಾಗಿ ಪೂರ್ವನಿಯೋಜಿತವಾದ ಪಿತೂರಿಯಾಗಿದೆ ಎಂದು ಮೋದಿ ಆರೋಪಿಸಿದ್ದಾರೆ.

ಸಂವಿಧಾನವನ್ನು ಬದಲಾಯಿಸುತ್ತಾರೆ, ಮೀಸಲಾತಿಯನ್ನು ತೆಗೆದುಹಾಕುತ್ತಾರೆ, ಭೂಮಿಯನ್ನು ತೆಗೆದುಕೊಳ್ಳುತ್ತಾರೆ ಎಂಬಂತಹ ವದಂತಿ, ಸುಳ್ಳುಗಳನ್ನು ಇಂತಹ ವ್ಯಕ್ತಿಗಳು ಹಬ್ಬಿಸುತ್ತಾರೆ. ಇವೆಲ್ಲವೂ ಸುಳ್ಳುಗಳು ಹಾಗೂ ವದಂತಿಗಳಷ್ಟೇ ಎಂದು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುಳ್ಳು ಸುದ್ದಿಗಳ ಬಗ್ಗೆ ಜನತೆಗೆ ಅರಿವು ಮೂಡಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಬಿಜೆಪಿ, ವಂಶಾಡಳಿತದ ರಾಜಕಾರಣವನ್ನು ಬಿಜೆಪಿ ಕೊನೆಗಾಣಿಸುತ್ತಿದೆ. ವಂಶಾಡಳಿತದ ರಾಜಕಾರಣಕ್ಕೆ ಅಂತ್ಯ ಹಾಡುತ್ತಿರುವುದರಿಂದ ಸಮರ್ಥ ನಾಯಕತ್ವಕ್ಕೆ ಉತ್ತಮ ಅವಕಾಶ ದೊರೆಯಲಿದೆ ಎಂದು ಮೋದಿ ಹೇಳಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp