ಕೋವಿಡ್-19 ಸೋಂಕಿನ ಆರ್ಭಟ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೈಟ್ ಕರ್ಫ್ಯೂ ಜಾರಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಡೆಯುವ ನಿಟ್ಟಿನಲ್ಲಿ ಮಂಗಳವಾರದಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. 

Published: 06th April 2021 12:19 PM  |   Last Updated: 06th April 2021 12:26 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : ANI

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಡೆಯುವ ನಿಟ್ಟಿನಲ್ಲಿ ಮಂಗಳವಾರದಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. 

ಹೌದು.. ದಿನೇ ದಿನೇ ದೆಹಲಿಯಲ್ಲಿ ಕೋವಿಡ್ ಸೋಂಕು ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಇದೇ ಮಂಗಳವಾರ ಅಂದರೆ ಏಪ್ರಿಲ್ 6 ರಿಂದ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. 

ಏಪ್ರಿಲ್ 6 ರಿಂದ ಏಪ್ರಿಲ್ 30ರವರೆಗೂ ದೆಹಲಿಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೂ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ದೆಹಲಿಯಲ್ಲಿ ನಿನ್ನೆ ಒಂದೇ ದಿನ 3,548 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, 2,936 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಈ ವರೆಗೂ ರಾಷ್ಟ್ರ ರಾಜಧಾನಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,79,962ಕ್ಕೆ ಏರಿಕೆಯಾಗಿದ್ದು, 14,589 ಸಕ್ರಿಯ ಪ್ರಕರಣಗಳಿವೆ ಎಂದು ವರದಿಗಳು ತಿಳಿಸಿವೆ. 

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 96,982 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,26,86,049ಕ್ಕೆ ಏರಿಕೆಯಾಗಿದೆ. 

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp