ದೇಶ್ ಮುಖ್ ವಿರುದ್ಧದ ಭ್ರಷ್ಟಾಚಾರ ಆರೋಪ: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮಹಾ ಸರ್ಕಾರದಿಂದ ಸುಪ್ರೀಂಗೆ ಮೇಲ್ಮನವಿ
ಎನ್ ಸಿಪಿ ಮುಖಂಡ ಅನಿಲ್ ದೇಶ್ ಮುಖ್ ವಿರುದ್ಧದ ಭ್ರಷ್ಟಾಚಾರ ಆರೋಪ ಕುರಿತು ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ ಬಾಂಬೆ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮಹಾರಾಷ್ಟ್ರ ಸರ್ಕಾರದಿಂದ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಗೃಹ ಸಚಿವ ದಿಲಿಪ್ ವಾಲ್ಸೆ ಪಾಟೀಲ್ ಮಂಗಳವಾರ ಹೇಳಿದ್ದಾರೆ.
Published: 06th April 2021 04:06 PM | Last Updated: 06th April 2021 05:16 PM | A+A A-

ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶ್ ಮುಖ್
ಮುಂಬೈ: ಎನ್ ಸಿಪಿ ಮುಖಂಡ ಅನಿಲ್ ದೇಶ್ ಮುಖ್ ವಿರುದ್ಧದ ಭ್ರಷ್ಟಾಚಾರ ಆರೋಪ ಕುರಿತು ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ ಬಾಂಬೆ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮಹಾರಾಷ್ಟ್ರ ಸರ್ಕಾರದಿಂದ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಗೃಹ ಸಚಿವ ದಿಲಿಪ್ ವಾಲ್ಸೆ ಪಾಟೀಲ್ ಮಂಗಳವಾರ ಹೇಳಿದ್ದಾರೆ.
ಅನಿಲ್ ದೇಶ್ ಮುಖ್ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಮಾಡಿದ್ದ ಆರೋಪಗಳಿಗೆ ಸಂಬಂಧಿಸಿದಂತೆ 15 ದಿನಗಳೊಳಗೆ ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ ಬಾಂಬೆ ಹೈಕೋರ್ಟ್ ಸೋಮವಾರ ನಿರ್ದೇಶಿಸಿತ್ತು.ಇದಾದ ನಂತರ ದೇಶ್ ಮುಖ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ನಂತರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ , ಪ್ರಮುಖ ಇಲಾಖೆಯಾದ ಗೃಹ ಖಾತೆ ಜವಾಬ್ದಾರಿಯನ್ನು ಎನ್ ಸಿಪಿ ಮುಖಂಡ ದಿಲೀಪ್ ವಾಲ್ಸಾ ಪಾಟೀಲ್ ಅವರಿಗೆ ನೀಡಿದ್ದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಾಲ್ಸೆ ಪಾಟೀಲ್, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು, ಬಾಂಬೆ ಹೈಕೋರ್ಟ್ ತೀರ್ಪುನ್ನು ಸುಪ್ರೀಂನಲ್ಲಿ ಸರ್ಕಾರ ಪ್ರಶ್ನಿಸಲಿದೆ ಎಂದು ತಿಳಿಸಿದರು.