''ಕರ್ಮ ಯಾರನ್ನೂ ಬಿಡುವುದಿಲ್ಲ'': ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ
ರಫೇಲ್ ಯುದ್ಧ ವಿಮಾನ ಖರೀದಿ ಸಂಬಂಧ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ಯಾರೊಬ್ಬರೂ ಅವರ ಕರ್ಮದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
Published: 06th April 2021 08:15 PM | Last Updated: 07th April 2021 01:29 PM | A+A A-

ರಾಹುಲ್ ಗಾಂಧಿ
ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಸಂಬಂಧ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ಯಾರೊಬ್ಬರೂ ಅವರ ಕರ್ಮದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಯುದ್ಧ ವಿಮಾನ ಖರೀದಿ ಪ್ರಕ್ರಿಯೆಯಲ್ಲಿ, 1.1 ಮಿಲಿಯನ್ ಯುರೋಗಳನ್ನು ವಿಮಾನ ತಯಾರಕರಿಂದ 'ಮಧ್ಯವರ್ತಿ' ಗೆ ಪಾವತಿಸಲಾಗಿದೆ ಎಂದು ಫ್ರೆಂಚ್ ಮಾಧ್ಯಮ ವರದಿಯನ್ನು ಉಲ್ಲೇಖಿಸಿದ ಅವರು, ಕರ್ಮ ಒಬ್ಬರ ಕ್ರಿಯೆಯ ಲೆಡ್ಜರ್ ನಂತೆ. ಯಾರೂ ಅದನ್ನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ" ಎಂದು ಟ್ವೀಟ್ ಮಾಡಿದ್ದಾರೆ.
Karma = The ledger of one's actions.
— Rahul Gandhi (@RahulGandhi) April 6, 2021
Nobody escapes it.#Rafale
ಈ ವರದಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಬೇಕು ಮತ್ತು ಒಪ್ಪಂದದ ಬಗ್ಗೆ ಬಹಿರಂಗಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.