ಬರೇಲಿ ರೈಲ್ವೆ ನಿಲ್ದಾಣದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಟಿಟಿಇ ಅಮಾನತು

ಬರೇಲಿ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 23 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಟಿಕೆಟ್ ಪರೀಕ್ಷಕನನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

Published: 06th April 2021 04:34 PM  |   Last Updated: 06th April 2021 04:44 PM   |  A+A-


For representational purpose

ಸಂಗ್ರಹ ಚಿತ್ರ

Posted By : Vishwanath S
Source : PTI

ಬರೇಲಿ: ಬರೇಲಿ ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 23 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಟಿಕೆಟ್ ಪರೀಕ್ಷಕನನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಲಖನೌಗೆ ಪ್ರಯಾಣಿಸಲು ಶ್ರಮಜೀವಿ ಕೋವಿಡ್-19 ವಿಶೇಷ ರೈಲಿಗಾಗಿ ಕಾಯುತ್ತಿದ್ದಾಗ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದರು.

ಲಖನೌದ ಚಾರ್ಬಾಗ್‌ನ ಸರ್ಕಾರಿ ರೈಲ್ವೆ ಪೊಲೀಸ್(ಜಿಆರ್‌ಪಿ) ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ನಲ್ಲಿ, ತಾನು ಸಮಯಕ್ಕಿಂತ ಮುಂಚಿತವಾಗಿ ನಿಲ್ದಾಣವನ್ನು ತಲುಪಿದ್ದೆ ಆದರೆ ಟಿಟಿಇ ರವಿ ಮೀನಾ ತನ್ನೊಂದಿಗೆ ಕೆಟ್ಟದಾಗಿ ವರ್ತಿಸಿದರು. ಅಲ್ಲದೆ ನನ್ನ ಕೈಯನ್ನು ಹಿಡಿದು ಅಶ್ಲೀಲ ಸನ್ನೆ ಮಾಡಿ ತನ್ನನ್ನು ಹಿಂಬಾಲಿಸುವಂತೆ ಹೇಳಿದರು ಎಂದು ದೂರಿದ್ದಾರೆ. 

ರೈಲು ಹತ್ತಿದ ನಂತರ, ಯುವತಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದ್ದು ಲಖೌನಾ ಚಾರ್ಬಾಗ್ ರೈಲ್ವೆ ನಿಲ್ದಾಣವನ್ನು ತಲುಪಿದ ನಂತರ ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆಯನ್ನು ಗಮನಿಸಿದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ರೇಖಾ ಶರ್ಮಾ ಟಿಟಿಇಯನ್ನು ಅಮಾನತುಗೊಳಿಸಿದ್ದು ಜೊತೆಗೆ ತನಿಖೆಯನ್ನು ಬರೇಲಿ ಪೊಲೀಸರಿಗೆ ವರ್ಗಾಯಿಸಿದರು.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp