ಪಂಚರಾಜ್ಯ ಚುನಾವಣೆ: ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಕರೆ

ಪಂಚರಾಜ್ಯ ಚುನಾವಣೆ ಕುತೂಹಲದ ಘಟ್ಟ ತಲುಪಿದ್ದು, ಮಂಗಳವಾರ ತಮಿಳುನಾಡು, ಪುದುಚೇರಿ ಹಾಗೂ ಕೇರಳದಲ್ಲಿ ಒಂದನೇ ಹಂತ ಹಾಗೂ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ 3ನೇ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.

Published: 06th April 2021 08:37 AM  |   Last Updated: 06th April 2021 01:08 PM   |  A+A-


PM modi

ಪ್ರಧಾನಿ ಮೋದಿ

Posted By : Manjula VN
Source : Online Desk

ನವದೆಹಲಿ: ಪಂಚರಾಜ್ಯ ಚುನಾವಣೆ ಕುತೂಹಲದ ಘಟ್ಟ ತಲುಪಿದ್ದು, ಮಂಗಳವಾರ ತಮಿಳುನಾಡು, ಪುದುಚೇರಿ ಹಾಗೂ ಕೇರಳದಲ್ಲಿ ಒಂದನೇ ಹಂತ ಹಾಗೂ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ 3ನೇ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯುತ್ತಿದೆ. ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಮುಖವಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ. 

ಕೇರಳದ 140 ಹಾಗೂ ತಮಿಳುನಾಡಿನ 234 ಪುದುಚೇರಿಯ 30 ಕ್ಷೇತ್ರದ ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಸೇರಲಿದೆ. ಕೇರಳದಲ್ಲಿ ಎಲ್‍ಡಿಎಫ್, ಯುಡಿಎಫ್ ಮತ್ತು ಎನ್‍ಡಿಎ ಒಕ್ಕೂಟದ ನಡುವೆ ತ್ರಿಕೋನ ಸ್ಪರ್ಧೆ ಇದೆ. 

ಇತ್ತ ತಮಿಳುನಾಡಿನಲ್ಲಿ ಡಿಎಂಕೆ ವರ್ಸಸ್ ಎಐಎಡಿಎಂ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ಪುದುಚೇರಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸಂಘರ್ಷ ಏರ್ಪಟ್ಟಿದೆ. ಎರಡನೇ ಬಾರಿಗೆ ಸಿಎಂ ಆಗಲು ಪಿಣರಾಯಿ ವಿಜಯನ್ ಮತ್ತು ಎಡಪ್ಪಾಡಿ ಪಳನಿಸ್ವಾಮಿ ಪ್ರಯತ್ನದಲ್ಲಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp