ಕೊರೋನಾ ಹೆಚ್ಚಳದ ಮಧ್ಯೆ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಲಸಿಕೆ ಕೊರತೆ

ಮಹಾರಾಷ್ಟ್ರದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚುತ್ತಿರುವುದರ ಮಧ್ಯೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೋವಿಡ್ ಲಸಿಕೆ ಕೊರತೆ ಎದುರಾಗಿದೆ. 

Published: 07th April 2021 01:14 PM  |   Last Updated: 07th April 2021 01:14 PM   |  A+A-


Covid-19_vaccine_image1

ಸಾಂದರ್ಭಿಕ ಚಿತ್ರ

Posted By : Lingaraj Badiger
Source : PTI

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಹೆಚ್ಚುತ್ತಿರುವುದರ ಮಧ್ಯೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೋವಿಡ್ ಲಸಿಕೆ ಕೊರತೆ ಎದುರಾಗಿದೆ. 

ಮಹಾರಾಷ್ಟ್ರದ ಹಲವಾರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ದಿನಗಳಲ್ಲಿ ಕೋವಿಡ್-19 ಲಸಿಕೆ ದಾಸ್ತಾನು ಮುಗಿಯಲಿದ್ದು, ಇದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ ಎಂದು ರಾಜ್ಯದ ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ರಾಜ್ಯದಲ್ಲಿ ಪಸ್ತುತ ಸುಮಾರು 14 ಲಕ್ಷ ಡೋಸ್ ಲಸಿಕೆ ಲಭ್ಯವಿದೆ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರದೀಪ್ ವ್ಯಾಸ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಇಂದು ಅಥವಾ ನಾಳೆ ಅನೇಕ ಜಿಲ್ಲೆಗಳಲ್ಲಿ ಸ್ಟಾಕ್ ಮುಗಿಯುತ್ತದೆ. ಈ ಪರಿಸ್ಥಿತಿಯ ಬಗ್ಗೆ ಕೇಂದ್ರಕ್ಕೆ ಮಾಹಿತಿ ನೀಡಿದ್ದೇವೆ ಮತ್ತು ಈ ಸಂಬಂಧ ಲಿಖಿತವಾಗಿ ಸಂವಹನ ನಡೆಸಿದ್ದೇವೆ "ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ದಿನಕ್ಕೆ ಐದು ಲಕ್ಷ ಮಂದಿಗೆ ಲಸಿಕೆ ನೀಡಬಹುದು. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಪ್ರತಿದಿನ ಸುಮಾರು ನಾಲ್ಕು ಲಕ್ಷ ಜನರಿಗೆ ಲಸಿಕೆ ನೀಡುತ್ತಿದ್ದೇವೆ. ರಾಜ್ಯದಲ್ಲಿ ಇದುವರೆ ಸುಮಾರು 82 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ ಅವರು ತಿಳಿಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp