ಕೋವಿಡ್-19: ದೇಶದಲ್ಲಿಂದು 1,15,736 ಹೊಸ ಕೇಸ್, 630 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಎಂದಿನಂತೆ ಮುಂದುವರೆದಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಬರೋಬ್ಬರಿ 1,15,736 ಹೊಸ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

Published: 07th April 2021 09:36 AM  |   Last Updated: 07th April 2021 09:36 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : ANI

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಎಂದಿನಂತೆ ಮುಂದುವರೆದಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಬರೋಬ್ಬರಿ 1,15,736 ಹೊಸ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ 630 ಮಂದಿಯನ್ನು ಮಹಾಮಾರಿ ವೈರಸ್ ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,66,177ಕ್ಕೆ ಏರಿಕೆಯಾಗಿದೆ. 

ಹೊಸ ಕೇಸ್ ಗಳು ಏರುಗತಿಯಲ್ಲಿರುವ ಕಾರಣ ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 8,43,473ಕ್ಕೆ ತಲುಪಿದೆ. 

ಒಂದೇ ದಿನ 59,856 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,28,01,785ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 59,856 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,17,92,135ಕ್ಕೆ ತಲುಪಿದೆ. 

ಇನ್ನು ಭಾರತದಲ್ಲಿ ಒಂದೇ ದಿನ 12,08,329 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 25,14,39,598 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 8,70,77,474 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp