ಆರೋಗ್ಯ ವಲಯದಲ್ಲಿ ಸಂಶೋಧನೆ ಮತ್ತು ನಾವೀನ್ಯತೆಗೆ ಪ್ರೋತ್ಸಾಹ ನೀಡಲು ಬದ್ಧ: ವಿಶ್ವ ಆರೋಗ್ಯ ದಿನಕ್ಕೆ ಪ್ರಧಾನಿ ಮೋದಿ ಕರೆ 

ಜನತೆ ಮತ್ತು ನಮ್ಮ ಪರಿಸರವನ್ನು ಆರೋಗ್ಯವಾಗಿಡುವಲ್ಲಿ ಹಗಲಿರುಳು ಶ್ರಮಿಸುತ್ತಿರುವವರಿಗೆ ಕೃತಜ್ಞತೆ ಮತ್ತು ಮೆಚ್ಚುಗೆಯನ್ನು ತಿಳಿಸುವ ದಿನ ಇದಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪುನರುಚ್ಛರಿಸಿದ್ದಾರೆ.

Published: 07th April 2021 01:28 PM  |   Last Updated: 07th April 2021 01:28 PM   |  A+A-


PM Narendra Modi

ಪ್ರಧಾನ ಮಂತ್ರಿ ನರೇಂದ್ರ ಮೋದಿ

Posted By : Sumana Upadhyaya
Source : PTI

ನವದೆಹಲಿ: ಜನತೆ ಮತ್ತು ನಮ್ಮ ಪರಿಸರವನ್ನು ಆರೋಗ್ಯವಾಗಿಡುವಲ್ಲಿ ಹಗಲಿರುಳು ಶ್ರಮಿಸುತ್ತಿರುವವರಿಗೆ ಕೃತಜ್ಞತೆ ಮತ್ತು ಮೆಚ್ಚುಗೆಯನ್ನು ತಿಳಿಸುವ ದಿನ ಇದಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪುನರುಚ್ಛರಿಸಿದ್ದಾರೆ.

ಏಪ್ರಿಲ್ 7 ವಿಶ್ವ ಆರೋಗ್ಯ ದಿನವಾಗಿದ್ದು ಇಂದು ಶುಭಾಶಯ ತಿಳಿಸಿರುವ ಅವರು, ಆರೋಗ್ಯವಲಯದಲ್ಲಿ ಸಂಶೋಧನೆ ಮತ್ತು ನಾವೀನ್ಯತೆಗೆ ಬೆಂಬಲ ನೀಡುವಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಮತ್ತೊಮ್ಮೆ ಹೇಳಿದ್ದಾರೆ.

ಸದ್ಯ ಭಾರತ ಸೇರಿದಂತೆ ವಿಶ್ವದ ಸಮಸ್ಯೆ ಕೋವಿಡ್-19 ಸಾಂಕ್ರಾಮಿಕವಾಗಿದ್ದು ಅದರ ವಿರುದ್ಧ ಹೋರಾಡುವಲ್ಲಿ ಮಾಸ್ಕ್ ನ್ನು ಕಡ್ಡಾಯವಾಗಿ ಧರಿಸಿ, ಆಗಾಗ ಕೈ ತೊಳೆಯುತ್ತಿರಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಇತರ ಶಿಷ್ಟಾಚಾರ ಕಾಪಾಡಿ ಎಂದು ಮತ್ತೊಮ್ಮೆ ಜನತೆಗೆ ಮೋದಿ ಕರೆ ನೀಡಿದ್ದಾರೆ.

ಉನ್ನತ ಗುಣಮಟ್ಟದ ಮತ್ತು ಕೈಗೆಟುಕುವ ಆರೋಗ್ಯ ಸೇವೆ ಜನರಿಗೆ ದೊರೆಯುವಂತೆ ಭಾರತ ಸರ್ಕಾರ ಆಯುಷ್ಮಾನ್ ಭಾರತ್ ಮತ್ತು ಪಿಎಂ ಜನೌಶಧಿ ಯೋಜನೆ ಸೇರಿದಂತೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಕೋವಿಡ್-19 ವಿರುದ್ಧದ ಹೋರಾಟವನ್ನು ಬಲಪಡಿಸಲು ಭಾರತವು ವಿಶ್ವದ ಅತಿದೊಡ್ಡ ಲಸಿಕಾ ಅಭಿಯಾನವನ್ನು ಕೈಗೊಂಡಿದೆ ಎಂದು ಪ್ರಧಾನಿ ಟ್ವೀಟ್ ಮೂಲಕ ಹೇಳಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp