ಲಾಕ್ ಡೌನ್ ಜಾರಿಗೂ ಮುನ್ನ ಉದ್ಧವ್ ಠಾಕ್ರೆ ವಿಪಕ್ಷ ನಾಯಕರೊಂದಿಗೆ ಚರ್ಚಿಸಿದ್ದರು: ಫಡ್ನವಿಸ್ ಗೆ ಸಂಜಯ್ ತಿರುಗೇಟು

ಲಾಕ್ ಡೌನ್ ಜಾರಿಗೂ ಮುನ್ನ ಉದ್ಧವ್ ಠಾಕ್ರೆ ವಿಪಕ್ಷಗಳ ನಾಯಕರೊಂದಿಗೆ ಚರ್ಚಿಸಿದ್ದರು, ಆ ಬಳಿಕವಷ್ಟೇ ನಿರ್ಧಾರ ಪ್ರಕಟಿಸಿದ್ದರು ಎಂದು ಶಿವಸೇನೆ ಸಂಸದ ಸಂಜಯ್ ರಾವುತ್‌ ಹೇಳಿದ್ದಾರೆ.

Published: 07th April 2021 04:45 PM  |   Last Updated: 07th April 2021 06:51 PM   |  A+A-


Sanjay_Raut1

ಸಂಜಯ್ ರಾವತ್

Posted By : Srinivas Rao BV
Source : The New Indian Express

ಮುಂಬೈ: ಲಾಕ್ ಡೌನ್ ಜಾರಿಗೂ ಮುನ್ನ ಉದ್ಧವ್ ಠಾಕ್ರೆ ವಿಪಕ್ಷಗಳ ನಾಯಕರೊಂದಿಗೆ ಚರ್ಚಿಸಿದ್ದರು ಆ ಬಳಿಕವಷ್ಟೇ ನಿರ್ಧಾರ ಪ್ರಕಟಿಸಿದ್ದರು ಎಂದು ಶಿವಸೇನೆ ಸಂಸದ ಸಂಜಯ್ ರಾವುತ್‌ ಹೇಳಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಜನತೆಯ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದೆ. ಇಲ್ಲದೇ ಇದ್ದಿದ್ದರೆ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿತ್ತು. ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದರ ಬಗ್ಗೆ ಪ್ರಧಾನಿ ಮೋದಿ ಅವರೂ ಆತಂಕಗೊಂಡಿದ್ದಾರೆ ಎಂದು ರಾವುತ್‌ ಹೇಳಿದ್ದಾರೆ.

ಇದೇ ವೇಳೆ ಲಾಕ್ ಡೌನ್ ಜಾರಿಗೊಳಿಸಿರುವುದನ್ನು ಸಮರ್ಥಿಸಿಕೊಳ್ಳುವುದಕ್ಕೆ ರಾವತ್ ಗುಜರಾತ್ ಹೈಕೋರ್ಟ್ ನ ಶಿಫಾರಸನ್ನು ಉದಾಹರಣೆಯಾಗಿ ನೀಡಿದ್ದಾರೆ.

ನೆರೆ ರಾಜ್ಯ ಗುಜರಾತ್ ನಲ್ಲಿ ಹೈಕೋರ್ಟ್ ಸರ್ಕಾರಕ್ಕೆ ಲಾಕ್ ಡೌನ್ ಜಾರಿಗೊಳಿಸುವಂತೆ ಸೂಚನೆ ನೀಡಿದೆ, ಇದರ ಅರ್ಥ ಹೈಕೋರ್ಟ್ ಸಹ ಲಾಕ್ ಡೌನ್ ಪರಿಸ್ಥಿತಿಯನ್ನು ನಿಭಾಯಿಸುವುದಕ್ಕೆ ಸಂಬಂಧಪಟ್ಟಿದ್ದಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ ಎಂದು ರಾವುತ್‌ ಹೇಳಿದ್ದಾರೆ.

ರಾಜ್ಯದಲ್ಲಿ ಕೋವಿಡ್-19 ತಡೆಗೆ ಕಠಿಣ ನಿರ್ಬಂಧಗಳನ್ನು ವಿಧಿಸಿರುವುದನ್ನು ಮರುಪರಿಶೀಲನೆ ನಡೆಸಬೇಕೆಂದು ಬಿಜೆಪಿ ನಾಯಕ, ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದು ಮನವಿ ಮಾಡಿದ್ದಕ್ಕೆ ರಾವುತ್ ತಿರುಗೇಟು ನೀಡಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp