ಕೊರೋನಾ ಹೆಚ್ಚಳ: ಮಧ್ಯಪ್ರದೇಶದಲ್ಲಿ ವೀಕೆಂಡ್ ಲಾಕ್ಡೌನ್; ಸಿಎಂ ಘೋಷಣೆ!

ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣ ಮಧ್ಯಪ್ರದೇಶದ ನಗರ ಪ್ರದೇಶಗಳಲ್ಲಿ ಮತ್ತೆ ಮತ್ತೆ ಲಾಕ್ಡೌನ್ ಮರುಜಾರಿ ಮಾಡಲಾಗಿದೆ. 

Published: 08th April 2021 02:16 PM  |   Last Updated: 08th April 2021 02:24 PM   |  A+A-


Shivraj Singh Chouhan

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್

Posted By : Manjula VN
Source : Online Desk

ಭೋಪಾಲ್: ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣ ಮಧ್ಯಪ್ರದೇಶದ ನಗರ ಪ್ರದೇಶಗಳಲ್ಲಿ ಮತ್ತೆ ಮತ್ತೆ ಲಾಕ್ಡೌನ್ ಮರುಜಾರಿ ಮಾಡಲಾಗಿದೆ. 

ರಾಜ್ಯದ ಪ್ರಮುಖ ನಗರಗಳಲ್ಲಿ ನಾಳೆಯಿಂದ ಬರುವ 12 ವರೆಗೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆ ತನಕ ಸಂಪೂರ್ಣ ಲಾಕ್ಡೌನ್ ಅನ್ನು ಘೊಷಿಸಲಾಗಿದೆ.

ಇನ್ನೂ ಕೆಲ ನಗರಗಳಲ್ಲಿ 7 ದಿನಗಳ ಲಾಕ್ಡೌನ್ ಘೋಷಿಸಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ನಿನ್ನೆ ದೇಶಾದ್ಯಂತ 1 ಲಕ್ಷ 26 ಸಾವಿರಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಚಿಂದ್ವಾರದಲ್ಲಿ 7 ದಿನ ಪೂರ್ಣ ಲಾಕ್ಡೌನ್ ಹಾಕಲಾಗಿದೆ.

ಜೊತೆಗೆ ರತ್ಲಮ್, ಬೆತುಲ್, ಖರ್ಗಾಂವ್, ಗ್ವಾಲಿಯರ್, ಉಜ್ಜೈನ್, ವಿದಿಶಾ, ನರಸಿಂಗ್ಪುರ್, ಇಂದೋರ್, ಭೋಪಾಲ್, ಜಬಲ್ಪುರ್ ನಗರಗಳಲ್ಲೂ ಸಹ ಕನಿಷ್ಠ 3 ದಿನಗಳ ಲಾಕ್ಡೌನ್ ಜಾರಿ ಮಾಡಿದ ಮಾಹಿತಿ ದೊರಕಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಲಾಕ್ಡೌನ್ ಶುಕ್ರವಾರ ಸಂಜೆ 6 ಗಂಟೆಯಿಂದ ಆಸಂಭವಾಗಲಿದ್ದು, ಸೋಮವಾರ ಬೆಳಿಗ್ಗೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಹೆಚ್ಚೆಚ್ಚು ಸೋಂಕಿರುವ ಪ್ರದೇಶಗಳಲ್ಲಿ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳು ಸಭೆ ನಡೆಸಲಿವೆ. ಸಭೆ ಬಳಿಕ ಮುಂದಿನ ನಿರ್ಧಾರಗಳನ್ನು ಕೈಗಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೋಂಕಿತರಿಗೆ ಚಿಕಿತ್ಸೆ ನೀಡಲು ಎಲ್ಲಾ ಜಿಲ್ಲೆಗಳಲ್ಲೂ ಕೋವಿಡ್ ಕೇರ್ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp