ಮಹಾರಾಷ್ಟ್ರದಲ್ಲಿ ಕೋವಿಡ್ ನಿಯಂತ್ರಿಸಲು ಸಹಕಾರ ನೀಡುವುದಾಗಿ ಕೇಂದ್ರ ಭರವಸೆ ನೀಡಿದೆ: ಎನ್ ಸಿಪಿ ವರಿಷ್ಠ ಶರದ್ ಪವಾರ್

ಕೋವಿಡ್ ಸಾಂಕ್ರಾಮಿಕ ಸೋಂಕು ವ್ಯಾಪಕವಾಗಿ ಹಬ್ಬಿ ಸಂಕಷ್ಟದಲ್ಲಿರುವ ಮಹಾರಾಷ್ಟ್ರಕ್ಕೆ ಸಹಾಯ ಮಾಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದು ಎನ್ ಸಿಪಿ ನಾಯಕ ಶರದ್ ಪವಾರ್ ಗುರುವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

Published: 08th April 2021 01:27 PM  |   Last Updated: 08th April 2021 01:29 PM   |  A+A-


Sharad Pawar

ಶರದ್ ಪವಾರ್

Posted By : Sumana Upadhyaya
Source : PTI

ಮುಂಬೈ: ಕೋವಿಡ್ ಸಾಂಕ್ರಾಮಿಕ ಸೋಂಕು ವ್ಯಾಪಕವಾಗಿ ಹಬ್ಬಿ ಸಂಕಷ್ಟದಲ್ಲಿರುವ ಮಹಾರಾಷ್ಟ್ರಕ್ಕೆ ಸಹಾಯ ಮಾಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದು ಎನ್ ಸಿಪಿ ನಾಯಕ ಶರದ್ ಪವಾರ್ ಗುರುವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಫೇಸ್ ಬುಕ್ ಲೈವ್ ನಲ್ಲಿ ಇಂದು ಮಾತನಾಡಿದ ಅವರು, ನಿನ್ನೆ ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಅವರೊಂದಿಗೆ ಮಾತುಕತೆಯಾಡಿದ್ದು ಕೋವಿಡ್ ನಿಯಂತ್ರಣಕ್ಕೆ ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ನಿರ್ಬಂಧ ಹೇರದೆ ಬೇರೆ ಮಾರ್ಗವೇ ಇಲ್ಲದಂತಾಗಿದೆ ರಾಜ್ಯ ಸರ್ಕಾರದ ಮುಂದೆ. ಪರಿಸ್ಥಿತಿಯ ಗಂಭೀರತೆ ಅರ್ಥಮಾಡಿಕೊಂಡು ಎಲ್ಲಾ ಸಂಬಂಧಪಟ್ಟವರಲ್ಲಿ ಸಹಕಾರ ನೀಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ. ನಾಗರಿಕರ ಜೀವವನ್ನು ಕಾಪಾಡಲು ಕೆಲವು ಕಠಿಣ ಕ್ರಮ ಅತ್ಯಗತ್ಯ ಎಂದರು.

ಕೇಂದ್ರ ಸರ್ಕಾರ ಕೂಡ ನಮಗೆ ಸಹಾಯ ಮಾಡುತ್ತಿದೆ. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರ ಜೊತೆ ನಿನ್ನೆ ನಾನು ಮಾತನಾಡಿದ್ದು ಅವರು ಎಲ್ಲಾ ರೀತಿಯ ನೆರವು ನೀಡುವ ಭರವಸೆ ನೀಡಿದ್ದಾರೆ ಎಂದರು.

ನಿನ್ನೆ ಮಹಾರಾಷ್ಟ್ರ ಸರ್ಕಾರ ಮತ್ತು ಇತರ ಕೆಲವು ರಾಜ್ಯಗಳ ಮೇಲೆ ಹರಿಹಾಯ್ದಿದ್ದ ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್, ಸಾಂಕ್ರಾಮಿಕ ನಿಯಂತ್ರಣದಲ್ಲಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ವಿಫಲ ಪ್ರಯತ್ನಗಳನ್ನು ಮಾಡುತ್ತಾ ಬೇಜವಾಬ್ದಾರಿತನದ ಹೇಳಿಕೆಗಳನ್ನು ನೀಡುತ್ತಾ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು.

ಇಂದು ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿರುವ ಶರದ್ ಪವಾರ್, ಮಹಾರಾಷ್ಟ್ರದಲ್ಲಿ ಆರೋಗ್ಯ ಸೇವೆ ಕಾರ್ಯಕರ್ತರು ಸೋಂಕು ಹರಡುವುದನ್ನು ನಿಯಂತ್ರಿಸಲು ತಮ್ಮಿಂದಾದಷ್ಟು ಕೆಲಸ ಮಾಡುತ್ತಿದ್ದಾರೆ. ಸೋಂಕಿನ ಕೊಂಡಿಯನ್ನು ಕಡಿಯಲು ಸರ್ಕಾರ ನಿರ್ಬಂಧದಂತಹ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ಕೊಂಡಿಯನ್ನು ಮುರಿಯಿರಿ ಆದೇಶ ಪ್ರಕಾರ, ಅಷ್ಟೊಂದು ಅಗತ್ಯವಲ್ಲದ ಎಲ್ಲಾ ಅಂಗಡಿ-ಮುಂಗಟ್ಟುಗಳು ಏಪ್ರಿಲ್ 30ರವರೆಗೆ ಮುಚ್ಚಿರುತ್ತವೆ. 

Stay up to date on all the latest ರಾಷ್ಟ್ರೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp