ಪ್ರಕಾಶ್ ಜಾವಡೇಕರ್
ಪ್ರಕಾಶ್ ಜಾವಡೇಕರ್

ಮಹಾರಾಷ್ಟ್ರ 5 ಲಕ್ಷ ಡೋಸ್ ಕೋವಿಡ್ ಲಸಿಕೆ ವ್ಯರ್ಥ ಮಾಡಿದೆ: ಕೇಂದ್ರ ಸಚಿವ ಜಾವಡೇಕರ್ ಆರೋಪ

ರಾಜ್ಯ ಸರ್ಕಾರದ ಸೂಕ್ತ ಯೋಜನೆಯ ಕೊರತೆಯಿಂದಾಗಿ ಮಹಾರಾಷ್ಟ್ರದಲ್ಲಿ ಐದು ಲಕ್ಷ ಡೋಸ್ ಕೋವಿಡ್ -19 ಲಸಿಕೆಯನ್ನು ವ್ಯರ್ಥ ಮಾಡಲಾಗಿದೆ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ಹಿರಿಯ ಮುಖಂಡ ಪ್ರಕಾಶ್ ಜಾವಡೇಕರ್ ಗುರುವಾರ ಆರೋಪಿಸಿದ್ದಾರೆ.

ನವದೆಹಲಿ: ರಾಜ್ಯ ಸರ್ಕಾರದ ಸೂಕ್ತ ಯೋಜನೆಯ ಕೊರತೆಯಿಂದಾಗಿ ಮಹಾರಾಷ್ಟ್ರದಲ್ಲಿ ಐದು ಲಕ್ಷ ಡೋಸ್ ಕೋವಿಡ್ -19 ಲಸಿಕೆಯನ್ನು ವ್ಯರ್ಥ ಮಾಡಲಾಗಿದೆ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ಹಿರಿಯ ಮುಖಂಡ ಪ್ರಕಾಶ್ ಜಾವಡೇಕರ್ ಅವರು ಗುರುವಾರ ಆರೋಪಿಸಿದ್ದಾರೆ.

ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸ್ವತಃ ಮಹಾರಾಷ್ಟ್ರ ಮೂಲದ ಜಾವಡೇಕರ್ ಅವರು, ನಾನು ಎಲ್ಲಾ ಮಾಹಿತಿಯನ್ನು ಪಡೆದುಕೊಂಡಿದ್ದು, ಮಹಾರಾಷ್ಟ್ರ 23 ಲಕ್ಷ ಡೋಸ್ ಲಸಿಕೆ ಲಭ್ಯವಿದೆ ಎಂದು ಹೇಳಿದ್ದಾರೆ.

ಲಸಿಕೆ ಕೊರತೆಯಿಂದಾಗಿ ರಾಜ್ಯದ ಅನೇಕ ಲಸಿಕಾ ಕೇಂದ್ರಗಳನ್ನು ಬಂದ್ ಮಾಡಲಾಗುತ್ತಿದೆ. ರಾಜ್ಯದಲ್ಲಿ ಈಗ 14 ಲಕ್ಷ ಡೋಸ್ ಲಸಿಕೆ ಮಾತ್ರ ಲಭ್ಯವಿದೆ, ಇದು ಕೇವಲ ಮೂರು ದಿನಗಳವರೆಗೆ ಆಗುತ್ತದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ನಿನ್ನೆಯಷ್ಟೇ ಹೇಳಿದ್ದರು.

"ಮಹಾರಾಷ್ಟ್ರ ಸರ್ಕಾರ 23 ಲಕ್ಷ ಡೋಸ್ ಲಸಿಕೆಗಳನ್ನು ಹೊಂದಿದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ .... ಇದನ್ನು ಐದರಿಂದ ಆರು ದಿನಗಳವರೆಗೆ ನೀಡಬಹುದು. ಈಗ, ಲಸಿಕೆಯನ್ನು ಗ್ರಾಮ ಮತ್ತು ಜಿಲ್ಲೆಗಳಲ್ಲಿ ವಿತರಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ" ಜಾವಡೇಕರ್ ತಿಳಿಸಿದ್ದಾರೆ.

ಇದೇ ವೇಳೆ ಮಹಾರಾಷ್ಟ್ರ ಸರ್ಕಾರ ತನ್ನ ಯೋಜನೆಯ ಕೊರತೆಯಿಂದಾಗಿ "ಐದು ಲಕ್ಷ ಡೋಸ್ ಲಸಿಕೆಗಳನ್ನು ವ್ಯರ್ಥ ಮಾಡಿದೆ. ಇದು ಕಡಿಮೆ ಸಂಖ್ಯೆಯಲ್ಲ" ಎಂದು ಕೇಂದ್ರ ಸಚಿವರು ಆರೋಪಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com