ಕೋವಿಡ್ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಕರೆದ ಸಿಎಂಗಳ ಸಭೆಗೆ ಮಮತಾ ಗೈರು
ಕೋವಿಡ್ -19 ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕರೆದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ವರ್ಚುವಲ್ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸುವುದಿಲ್ಲ...
Published: 08th April 2021 03:03 PM | Last Updated: 08th April 2021 03:03 PM | A+A A-

ಮಮತಾ ಬ್ಯಾನರ್ಜಿ
ಕೋಲ್ಕತಾ: ಕೋವಿಡ್ -19 ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕರೆದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ವರ್ಚುವಲ್ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸುವುದಿಲ್ಲ ಎಂದು ರಾಜ್ಯ ಸರ್ಕಾರದ ಮೂಲಗಳು ಗುರುವಾರ ತಿಳಿಸಿವೆ.
ಸಭೆಯಲ್ಲಿ ಮುಖ್ಯಮಂತ್ರಿಗಳ ಬದಲಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಅವರು ಉಪಸ್ಥಿತರಿರುತ್ತಾರೆ ಎಂದು ಮೂಲಗಳು ತಿಳಿಸಿವೆ.
ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ನಿರತರಾಗಿರುವುದರಿಂದ ಪ್ರಧಾನಿ ಕರೆದ ಸಭೆಯಲ್ಲಿ ಭಾಗವಹಿಸುತ್ತಿಲ್ಲ ಎನ್ನಲಾಗಿದೆ.
ಭಾರತದಲ್ಲಿ ಕೊರೋನಾ 2ನೇ ಅಲೆಯ ಪ್ರತಾಪ ಮುಂದುವರೆದಿದ್ದು, ಗುರುವಾರ ದೇಶದಲ್ಲಿ ದಾಖಲೆಯ 1.26 ಲಕ್ಷ ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದು ದೇಶದಲ್ಲಿ ಸೋಂಕು ಕಾಣಿಸಿಕೊಂಡ ನಂತರ ಯಾವುದೇ ಒಂದು ದಿನದಲ್ಲಿ ದಾಖಲಾದ ಗರಿಷ್ಠ ಪ್ರಮಾಣವಾಗಿದೆ.