ಅನಿಲ್ ದೇಶಮುಖ್ ವಿರುದ್ಧದ ಸಿಬಿಐ ತನಿಖೆ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ

ಮಹಾರಾಷ್ಟ್ರ ಸರ್ಕಾರ ಮತ್ತು ಮಾಜಿ ಸಚಿವ ಅನಿಲ್ ದೇಶಮುಖ್ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಮಾಜಿ ಗೃಹ ಸಚಿವರ ವಿರುದ್ಧದ ಸಿಬಿಐ ತನಿಖೆ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.
ಅನಿಲ್ ದೇಶಮುಖ್
ಅನಿಲ್ ದೇಶಮುಖ್

ನವದೆಹಲಿ: ಮಹಾರಾಷ್ಟ್ರ ಸರ್ಕಾರ ಮತ್ತು ಮಾಜಿ ಸಚಿವ ಅನಿಲ್ ದೇಶಮುಖ್ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಮಾಜಿ ಗೃಹ ಸಚಿವರ ವಿರುದ್ಧದ ಸಿಬಿಐ ತನಿಖೆ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.

ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಿದ್ದ ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಅನಿಲ್ ದೇಶಮುಖ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.

ಈ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಮತ್ತು ಆರೋಪಗಳ ಸ್ವರೂಪ, ಗಂಭೀರತೆಯನ್ನು ನೋಡಿದರೆ ಈ ಬಗ್ಗೆ  ಸ್ವತಂತ್ರ ಏಜೆನ್ಸಿಯಿಂದ ತನಿಖೆಯ ಅಗತ್ಯವಿದೆ. ಇದು ಸಾರ್ವಜನಿಕ ವಿಶ್ವಾಸದ ವಿಷಯವಾಗಿದೆ ಎಂದು ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್ ಮತ್ತು ಹೇಮಂತ್ ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

"ಸಿಬಿಐ ಪ್ರಾಥಮಿಕ ತನಿಖೆಗೆ ನಿರ್ದೇಶಿಸಿರುವ ಬಾಂಬೆ ಹೈಕೋರ್ಟ್ ಆದೇಶದಲ್ಲಿ ನಾವು ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ" ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಅನಿಲ್ ದೇಶಮುಖ್ ಅವರ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಅನಿಲ್ ದೇಶಮುಖ್ ಅವರು ಮಹಾರಾಷ್ಟ್ರ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com