ಕಾಶಿ ವಿಶ್ವನಾಥ ದೇವಾಲಯ, ಜ್ಞಾನವಾಪಿ ಮಸೀದಿ ಎಎಸ್‌ಐ ಸಮೀಕ್ಷೆಗೆ ವಾರಣಾಸಿ ಕೋರ್ಟ್ ಒಪ್ಪಿಗೆ

ಪ್ರಸಿದ್ಧ ಯಾತ್ರಾಸ್ಥಳ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸಲು ವಾರಣಾಸಿ ನ್ಯಾಯಾಲಯವು ಗುರುವಾರ (ಏಪ್ರಿಲ್ 8) ಭಾರತೀಯ ಪುರಾತತ್ವ ಸರ್ವೇಕ್ಷಣಾ ಮಂಡಳಿಗೆ (ಎಎಸ್‌ಐ) ಅನುಮತಿ ನೀಡಿತು.
ಕಾಶಿ ವಿಶ್ವನಾಥ ದೇವಾಲಯ, ಜ್ಞಾನವಾಪಿ ಮಸೀದಿ
ಕಾಶಿ ವಿಶ್ವನಾಥ ದೇವಾಲಯ, ಜ್ಞಾನವಾಪಿ ಮಸೀದಿ

ವಾರಣಾಸಿ: ಪ್ರಸಿದ್ಧ ಯಾತ್ರಾಸ್ಥಳ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸಲು ವಾರಣಾಸಿ ನ್ಯಾಯಾಲಯವು ಗುರುವಾರ (ಏಪ್ರಿಲ್ 8) ಭಾರತೀಯ ಪುರಾತತ್ವ ಸರ್ವೇಕ್ಷಣಾ ಮಂಡಳಿಗೆ (ಎಎಸ್‌ಐ) ಅನುಮತಿ ನೀಡಿತು.

ವಾರಣಾಸಿಯ ಜಿಲ್ಲಾ ನ್ಯಾಯಾಲಯ (ಫಾಸ್ಟ್ ಟ್ರ್ಯಾಕ್ ಕೋರ್ಟ್) ಎಎಸ್‌ಐ ಸಮೀಕ್ಷೆಗೆ ಅನುಮತಿ ನೀಡಿದೆ.

ಸಮೀಕ್ಷೆಯ ವೆಚ್ಚವನ್ನು ಉತ್ತರ ಪ್ರದೇಶ ಸರ್ಕಾರ ಭರಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಫಾಸ್ಟ್ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶ ಅಶುತೋಷ್ ತಿವಾರಿ ಈ ಆದೇಶ ನೀಡಿದ್ದಾರೆ. 

ಜ್ಞಾನವಾಪಿ ಮಸೀದಿ ಇರುವ ಭೂಮಿಯನ್ನು ಹಿಂದೂಗಳಿಗೆ ಹಸ್ತಾಂತರಿಸುವಂತೆ ಕೋರಿ ವಕೀಲ ವಿಜಯ್ ಶಂಕರ್ ರಸ್ತೋಗಿ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

ಕಾಶಿ ವಿಶ್ವನಾಥ ದೇವಾಲಯದ ಒಂದು ಭಾಗವನ್ನು ನೆಲಸಮ ಮಾಡಿದ ನಂತರ 1664 ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬ್ ಈ ಮಸೀದಿಯನ್ನು ನಿರ್ಮಿಸಿದನೆಂದು ಅರ್ಜಿದಾರರು ಹೇಳಿಕೊಂಡಿದ್ದಾರೆ. 

ಜ್ಞಾನವಾಪಿ ಕಾಂಪೌಂಡ್‌ನ ಸಮೀಕ್ಷೆ ಕೋರಿ ಅರ್ಜಿಯ ವಿರುದ್ಧ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿ 2020 ರ ಜನವರಿಯಲ್ಲಿ ಆಕ್ಷೇಪಣೆ ಸಲ್ಲಿಸಿತ್ತು. ನ್ಯಾಯಾಲಯದ ಆದೇಶದ ನಂತರ, ಎಎಸ್ಐ ಸಮೀಕ್ಷೆ ನಡೆಸಲು ಸಮಿತಿ ರಚಿಸುವ ನಿರೀಕ್ಷೆಯಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com