ಪರಿಸ್ಥಿತಿ ಕೈಮೀರಿದರೆ ಸಂಪೂರ್ಣ ಲಾಕ್ ಡೌನ್ ಅನಿವಾರ್ಯ: ಮಹಾರಾಷ್ಟ್ರ ಆರೋಗ್ಯ ಸಚಿವ

ಕೋವಿಡ್-19 ಪ್ರಕರಣಗಳ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಮೂಲಸೌಕರ್ಯಗಳನ್ನು ಸುಧಾರಿಸಲು ರಾಜ್ಯದಲ್ಲಿ ಎರಡು ಅಥವಾ ಮೂರು ವಾರಗಳ "ಸಂಪೂರ್ಣ ಲಾಕ್ ಡೌನ್" ಅಗತ್ಯವಿದೆ.
ಲಾಕ್ ಡೌನ್ (ಸಾಂದರ್ಭಿಕ ಚಿತ್ರ)
ಲಾಕ್ ಡೌನ್ (ಸಾಂದರ್ಭಿಕ ಚಿತ್ರ)

ಮುಂಬೈ: ಕೋವಿಡ್-19 ಪ್ರಕರಣಗಳ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಮೂಲಸೌಕರ್ಯಗಳನ್ನು ಸುಧಾರಿಸಲು ರಾಜ್ಯದಲ್ಲಿ ಎರಡು ಅಥವಾ ಮೂರು ವಾರಗಳ "ಸಂಪೂರ್ಣ ಲಾಕ್ ಡೌನ್" ಅಗತ್ಯವಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ಅವರು ಶುಕ್ರವಾರ ಹೇಳಿದ್ದಾರೆ

ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಸಂಪೂರ್ಣ ಲಾಕ್ ಡೌನ್ ಅನಿವಾರ್ಯವಾಗಲಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಆದಾಗ್ಯೂ, ಸರ್ಕಾರ ಪ್ರಸ್ತುತ ಜಾರಿಗೊಳಿಸಿರುವ ಕಠಿಣ ನಿರ್ಬಂಧಗಳ ಕೊರೋನಾ ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

"ನಾನು ತಕ್ಷಣ ಲಾಕ್ ಡೌನ್ ಜಾರಿ ಪರವಾಗಿಲ್ಲದಿದ್ದರೂ ನಮಗೆ 15 ದಿನಗಳಿಂದ ಮೂರು ವಾರಗಳವರೆಗೆ ಸಂಪೂರ್ಣ ಲಾಕ್‌ಡೌನ್ ಅಗತ್ಯವಿದೆ. ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಇಲ್ಲ, ಔಷಧಿಗಳ ಕೊರತೆ ಇದೆ ಮತ್ತು ಹೆಚ್ಚುತ್ತಿರುವ ರೋಗಿಗಳನ್ನು ನಿಭಾಯಿಸಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಅಂತಹ ಕಠಿಣ ಕ್ರಮ ತೆಗೆದುಕೊಳ್ಳಬಹುದು" ಎಂದು ಟೋಪೆ ತಿಳಿಸಿದ್ದಾರೆ.

ಕೊರೋನಾ ಪರಿಸ್ಥಿತಿಯನ್ನು ಸರ್ಕಾರ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎಂಬ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಅವರು, ನಾವು ಸಹ ಪರೀಕ್ಷೆ, ಪತ್ತೆಹಚ್ಚುವಿಕೆ ಮತ್ತು ಚಿಕಿತ್ಸೆಯ ತತ್ವವನ್ನು ಅನುಸರಿಸುತ್ತಿದ್ದೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com