ಅಸ್ಸಾಂ ಚುನಾವಣೆ: ಶಾಸಕನ ಕಾರಿನಲ್ಲಿ ಇವಿಎಂ ಪತ್ತೆ, 4 ಬೂತ್‌ಗಳಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ

ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕರೊಬ್ಬರ ಕಾರಿನಲ್ಲಿ ಇವಿಎಂ ಪತ್ತೆಯಾದ ಹಿನ್ನೆಲೆಯಲ್ಲಿ ಅಸ್ಸಾಂನ ನಾಲ್ಕು ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಶನಿವಾರ ಆದೇಶಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗುವಾಹಟಿ: ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕರೊಬ್ಬರ ಕಾರಿನಲ್ಲಿ ಇವಿಎಂ ಪತ್ತೆಯಾದ ಹಿನ್ನೆಲೆಯಲ್ಲಿ ಅಸ್ಸಾಂನ ನಾಲ್ಕು ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಶನಿವಾರ ಆದೇಶಿಸಿದೆ. 

ಏಪ್ರಿಲ್ 20 ರಂದು ರತಾಬಾರಿ, ಸೋನೈ ಮತ್ತು ಹಫ್ಲಾಂಗ್ ಕ್ಷೇತ್ರಗಳ ಮತಗಟ್ಟೆಗಳಲ್ಲಿ ಮರು ಮತದಾನ ನಡೆಯಲಿದೆ ಎಂದು ಅಸ್ಸಾಂ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಏಪ್ರಿಲ್ 1 ರಂದು ಅಸ್ಸಾಂ ವಿಧಾನಸಭಾ ಚುನಾವಣೆಗೆ ನಡೆದ ಎರಡನೇ ಹಂತದಲ್ಲಿ ಈ ಮೂರು ಕ್ಷೇತ್ರಗಳಿಗೂ ಮತದಾನ ನಡೆದಿತ್ತು.

ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಸೇರಿದ ಕಾರಿನಲ್ಲಿ ಎಲೆಕ್ಟ್ರಾನಿಕ್ ಮತದಾನ ಯಂತ್ರ(ಇವಿಎಂ) ಪತ್ತೆಯಾದ ನಂತರ ರತಾಬಾರಿ (ಎಸ್‌ಸಿ) ಕ್ಷೇತ್ರದ ಇಂದಿರಾ ಎಂವಿ ಶಾಲೆಯಲ್ಲಿರುವ ಮತಗಟ್ಟೆ ಸಂಖ್ಯೆ 149 ರಲ್ಲಿ ಮರು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತನ್ನ ಆದೇಶದಲ್ಲಿ ತಿಳಿಸಿದೆ.

ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಕೃಷ್ಣೇಂದು ಪಾಲ್ ಅವರ ಪತ್ನಿಯ ಕಾರಿನಲ್ಲಿ ಇವಿಎಂ ಸಾಗಿಸಿದ ಘಟನೆ ಬಗ್ಗೆ ಕರೀಮ್‌ಗಂಜ್ ಜಿಲ್ಲಾಧಿಕಾರಿ ಹಾಗೂ ರಿಟರ್ನಿಂಗ್ ಆಫೀಸರ್ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com