ಬಿಜೆಪಿ ನಾಯಕ ಅಣ್ಣಾಮಲೈಗೆ ಕೊರೋನಾ ಸೋಂಕು

ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಸಿಂಗಂ ಅಣ್ಣಾಮಲೈಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. 
ಅಣ್ಣಾಮಲೈ
ಅಣ್ಣಾಮಲೈ

ಚೆನ್ನೈ: ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಸಿಂಗಂ ಅಣ್ಣಾಮಲೈಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. 

ಕೊರೋನಾ ಸೋಂಕು ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರನ್ನು ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

ಈ ಬಗ್ಗೆ ಸ್ವತಃ ಅಣ್ಣಾಮಲೈ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು. ತನ್ನ ಸಂಪರ್ಕಕ್ಕೆ ಬಂದವರು ಕೊರೋನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ತಮಿಳುನಾಡಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಅಣ್ಣಾಮಲೈ ಕೆಲ ದಿನಗಳ ಹಿಂದೆ ಅಲ್ಲಿನ ಸ್ಥಳೀಯ ಎಐಎಡಿಎಂಕೆ ನಾಯಕರೊಂದಿಗೆ ತಮ್ಮ ಚುನಾವಣಾ ಕ್ಷೇತ್ರದ ಪ್ರತಿಯೊಂದು ಮನೆಗೂ ಭೇಟಿ ನೀಡಿ ಪ್ರಚಾರ ನಡೆಸಿದ್ದರು. ಹಾಗೂ ಪ್ರತಿದಿನ ಕನಿಷ್ಟ 25-30 ಸಭೆಗಳಲ್ಲಿ ಭಾಗಿಯಾಗುತ್ತಿದ್ದರು.ಸಾವಿರಾರು ಯುವಜನರನ್ನು ಭೇಟಿ ಮಾಡಿದ್ದರು. ಹೀಗಾಗಿ ಆತಂಕ ಹೆಚ್ಚಾಗುವಂತೆ ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com