ಕೋವಿಡ್-19: ಮಹಾರಾಷ್ಟ್ರದಲ್ಲಿ ಒಂದೇ ದಿನ 63,294 ಪ್ರಕರಣ ದಾಖಲು

ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ 63,294 ಹೊಸ ಕೊರೋನಾವೈರಸ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 34,07,245ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

Published: 11th April 2021 10:42 PM  |   Last Updated: 12th April 2021 12:43 PM   |  A+A-


A_healthcare_worker_conducts_thermal_screening_on_a_woman1

ಮಹಿಳೆಯೊಬ್ಬರನ್ನು ಪರೀಕ್ಷಿಸುತ್ತಿರುವ ಆರೋಗ್ಯ ಕಾರ್ಯಕರ್ತ

Posted By : Nagaraja AB
Source : The New Indian Express

ಮುಂಬೈ: ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ 63,294 ಹೊಸ ಕೊರೋನಾವೈರಸ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 34,07,245ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಸೋಂಕಿನಿಂದ ಇಂದು 349 ರೋಗಿಗಳು ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ 57,987ಕ್ಕೆ ಏರಿಕೆಯಾಗಿದೆ. ಒಟ್ಟು 34,008 ರೋಗಿಗಳು ಆಸ್ಪತ್ರೆಯಿಂದ ಇಂದು ಬಿಡುಗಡೆಯಾಗುವುದರೊಂದಿಗೆ ಗುಣಮುಖರಾದವರ ಸಂಖ್ಯೆ 27,82,161ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರ ರಾಜ್ಯದಾದ್ಯಂತ ಭಾನುವಾರ 2,63,137 ಪರೀಕ್ಷೆಗಳನ್ನು ನಡೆಸಲಾಗಿದ್ದು, ಪ್ರಸ್ತುತ ರಾಜ್ಯದಲ್ಲಿ 5,65,587 ಸಕ್ರಿಯ ಪ್ರಕರಣಗಳಿವೆ. ಪ್ರಸ್ತುತ 31,75,585 ಜನರು ಹೋಮ್ ಕ್ವಾರಂಟೈನ್ ನಲ್ಲಿದ್ದು, 25, 694 ಜನರು ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದಾರೆ.

 ಮುಂಬೈನಲ್ಲಿ 9, 986 ಪ್ರಕರಣಗಳು, 79 ಸಾವು ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟಾರೇ ಪ್ರಕರಣಗಳ ಸಂಖ್ಯೆ 5,20,498ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 12,023 ಆಗಿದೆ. 

Stay up to date on all the latest ರಾಷ್ಟ್ರೀಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp