10 ಮಿಲಿಯನ್ ಡೋಸ್ ಲಸಿಕೆ ನೀಡಿದ ಮೊದಲ ರಾಜ್ಯ ಮಹಾರಾಷ್ಟ್ರ!

ಕೋವಿಡ್-19 ಸಾಂಕ್ರಮಿಕಕ್ಕೆ 10 ಮಿಲಿಯನ್ ಡೋಸ್ ಲಸಿಕೆಯನ್ನು ನೀಡಿರುವ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಮಹಾರಾಷ್ಟ್ರ ಪಾತ್ರವಾಗಿದೆ. 
ಕೋವಿಡ್-19 ಲಸಿಕೆ
ಕೋವಿಡ್-19 ಲಸಿಕೆ

ನವದೆಹಲಿ: ಕೋವಿಡ್-19 ಸಾಂಕ್ರಮಿಕಕ್ಕೆ 10 ಮಿಲಿಯನ್ ಡೋಸ್ ಲಸಿಕೆಯನ್ನು ನೀಡಿರುವ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಮಹಾರಾಷ್ಟ್ರ ಪಾತ್ರವಾಗಿದೆ. 

ಅಲ್ಲಿನ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಏ.11 ರ ಬೆಳಿಗ್ಗೆ ವರೆಗೂ 10,038,421 ಡೋಸ್ ಗಳಷ್ಟು ಲಸಿಕೆಯನ್ನು ನೀಡಾಲಾಗಿದೆ ಈ ವರೆಗೂ ನೀಡಲಾಗಿರುವ ಗರಿಷ್ಠ ಲಸಿಕೆಯ ಸಂಖ್ಯೆ ಇದಾಗಿದೆ ಎಂದು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಪ್ರದೀಪ್ ವ್ಯಾಸ್ ತಿಳಿಸಿದ್ದಾರೆ. 

ರಾಜ್ಯದಲ್ಲಿ ಲಸಿಕೆ ಕೊರತೆ ಎದುರಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಕೇಂದ್ರಕ್ಕೆ ಮಾಹಿತಿ ನೀಡಿರುವ ಬೆನ್ನಲ್ಲೆ ಈ ಅಂಕಿ-ಅಂಶಗಳು ಪ್ರಕಟಗೊಂಡಿವೆ. 

ಹಾರಾಷ್ಟ್ರ ಕೊರೋನಾ ಲಸಿಕೆ ಕೊರತೆ ಎದುರಿಸುತ್ತಿದೆ ಎಂಬ ವರದಿಗಳ ಮಧ್ಯೆಯೇ ರಾಜ್ಯಕ್ಕೆ ಇದುವರೆಗೆ 1.10 ಕೋಟಿ ಡೋಸ್ ಕೊರೋನಾ ಲಸಿಕೆ ಬಂದಿವೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಶನಿವಾರ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com