ಕೋವಿಡ್-19 ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಬೆಡ್ ಗಳ ಸಂಖ್ಯೆಯನ್ನು ಹೆಚ್ಚಿಸಿ: ಕೇಂದ್ರಕ್ಕೆ ದೆಹಲಿ ಸರ್ಕಾರ ಪತ್ರ

ದೇಶದ ರಾಜಧಾನಿ ದೆಹಲಿಯಲ್ಲಿ ಕೋವಿಡ್-19 ಬಗ್ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪರಾಮರ್ಶೆ ಸಭೆ ನಡೆಸಿದರು.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಕೋವಿಡ್-19 ಬಗ್ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪರಾಮರ್ಶೆ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್ ಗಳ ಸಂಖ್ಯೆಯನ್ನು ಹೆಚ್ಚುಸುವಂತೆ ಆದೇಶ ನೀಡಿದರು. ರಾಜಧಾನಿಯ ಹಲವು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳನ್ನು ಸಂಪೂರ್ಣವಾಗಿ ಕೋವಿಡ್-19 ರೋಗಿಗಳ ಚಿಕಿತ್ಸೆಗೆ ಸೀಮಿತಗೊಳಿಸುವ ಬಗ್ಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಕೇಜ್ರಿವಾಲ್, ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್ ಗಳ ಸಂಖ್ಯೆಯನ್ನು ಹೆಚ್ಚಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತೇವೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು, ಕೋವಿಡ್ ಶಿಷ್ಠಾಚಾರಗಳನ್ನು ಪಾಲಿಸಿ. ಅಗತ್ಯವಿದ್ದರೆ ಮಾತ್ರ ಆಸ್ಪತ್ರೆಗಳಿಗೆ ಹೋಗಿ, ಅನಗತ್ಯವಾಗಿ ಹೋಗಬೇಡಿ, ಅರ್ಹರಾದವರು 45 ವರ್ಷಕ್ಕಿಂತ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳಿ ಎಂದರು.

ಈ ಮಧ್ಯೆ ಇಂದು ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ದೆಹಲಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್, ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಹೋಗಿ, ಮಾಸ್ಕ್ ನ್ನು ಕಡ್ಡಾಯವಾಗಿ ಧರಿಸಿ ಎಂದು ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.

ಕೊರೋನಾ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ, ಕಳೆದ ಒಂದು ವಾರದಲ್ಲಿ 5 ಸಾವಿರ ಬೆಡ್ ಗಳನ್ನು ಹೆಚ್ಚಿಸಲಾಗಿದೆ ಎಂದರು.

ದೆಹಲಿಯಲ್ಲಿ ನಿನ್ನೆ 10 ಸಾವಿರದ 774 ಹೊಸ ಕೇಸುಗಳು ಪತ್ತೆಯಾಗಿದ್ದು, ಇದುವರೆಗೆ ರಾಜಧಾನಿಯಲ್ಲಿ ಒಂದು ದಿನದಲ್ಲಿ ಅತಿ ಹೆಚ್ಚು ಸಂಖ್ಯೆಯ ಕೊರೋನಾ ಕೇಸು ಪತ್ತೆಯಾಗಿದೆ. ನಿನ್ನೆಯ ವರದಿ ಪ್ರಕಾರ ರಾಜಧಾನಿಯಲ್ಲಿ 48 ಮಂದಿ ಮೃತಪಟ್ಟಿದ್ದು ಈ ಮೂಲಕ ದೆಹಲಿಯಲ್ಲಿ ಇದುವರೆಗೆ 11 ಸಾವಿರದ 283 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com