ಚುನಾವಣಾ ಪ್ರಚಾರಕ್ಕೆ 24 ಗಂಟೆ ನಿಷೇಧ ವಿರೋಧಿಸಿ ಮಮತಾ ಬ್ಯಾನರ್ಜಿ ಧರಣಿ! 

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ತಮಗೆ ಚುನಾವಣಾ ಆಯೋಗ ಚುನಾವಣಾ ಪ್ರಚಾರದಿಂದ 24 ಗಂಟೆ ನಿಷೇಧ ವಿಧಿಸಿರುವುದನ್ನು ವಿರೋಧಿಸಿ ಧರಣಿ ಪ್ರಾರಂಭಿಸಿದ್ದಾರೆ. 
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೋಲ್ಕತ್ತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ತಮಗೆ ಚುನಾವಣಾ ಆಯೋಗ ಚುನಾವಣಾ ಪ್ರಚಾರದಿಂದ 24 ಗಂಟೆ ನಿಷೇಧ ವಿಧಿಸಿರುವುದನ್ನು ವಿರೋಧಿಸಿ ಧರಣಿ ಪ್ರಾರಂಭಿಸಿದ್ದಾರೆ. 
 
ಕೋಲ್ಕತ್ತಾದ ಹೃದಯ ಭಾಗದಲ್ಲಿ ಮಮತಾ ಬ್ಯಾನರ್ಜಿ ಧರಣಿ ಪ್ರಾರಂಭಿಸಿದ್ದು, ತಮಗೆ ಚುನಾವಣಾ ಪ್ರಚಾರ ಮಾಡುವುದರಿಂದ 24 ಗಂಟೆಗಳ ಕಾಲ ನಿಷೇಧಿಸಿರುವ ಆಯೋಗದ ಕ್ರಮವನ್ನು ಮಮತಾ ಬ್ಯಾನರ್ಜಿ ಅಸಾಂವಿಧಾನಿಕ ಎಂದು ಹೇಳಿದ್ದಾರೆ. 

ವ್ಹೀಲ್ ಚೇರ್ ನಲ್ಲೇ ಮಹಾತ್ಮಾ ಗಾಂಧಿ ಪುತ್ಥಳಿಯ ಬಳಿ ಕುಳಿತು ಪ್ರತಿಭಟನೆ ನಡೆಸುತ್ತಿರುವ ಮಮತಾ ಬ್ಯಾನರ್ಜಿ ಗೆ ಬೇರೆ ಯಾವುದೇ ಪಕ್ಷದ ಮುಖಂಡರೂ ಸಾಥ್ ನೀಡಿಲ್ಲ. "ಟಿಎಂಸಿ ಅಥವಾ ಇನ್ನಿತರ ಯಾವುದೇ ಪಕ್ಷದ ಮುಖಂಡರೂ ಸಹ ಸ್ಥಳದಲ್ಲಿ ಇಲ್ಲ, ಮಮತಾ ಬ್ಯಾನರ್ಜಿಯೊಬರೇ ಸ್ಥಳದಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ" ಎಂದು ಟಿಎಂಸಿ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ. 

ಚುನಾವಣೆಯಲ್ಲಿ ಧರ್ಮದ ಆಧಾರದಲ್ಲಿ ಮತಯಾಚನೆ ಮಾಡಿದ್ದು ಹಾಗೂ ಕೇಂದ್ರ ಪಡೆಗಳ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಮಮತಾ ಬ್ಯಾನರ್ಜಿ ಅವರಿಗೆ ಚುನಾವಣಾ ಆಯೋಗ 24 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ನಿಷೇಧ ವಿಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com