ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲು ಕೇಂದ್ರಕ್ಕೆ ಕೇಜ್ರಿವಾಲ್ ಮನವಿ

ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ದೆಹಲಿ ಸಿಎಂ ಕೇಜ್ರಿವಾಲ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಪರೀಕ್ಷೆ (ಸಂಗ್ರಹ ಚಿತ್ರ)
ಪರೀಕ್ಷೆ (ಸಂಗ್ರಹ ಚಿತ್ರ)

ನವದೆಹಲಿ: ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ದೆಹಲಿ ಸಿಎಂ ಕೇಜ್ರಿವಾಲ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. 

2021 ರ ಶೈಕ್ಷಣಿಕ ವರ್ಷದ ಪರೀಕ್ಷೆಗಳನ್ನು ಕೋವಿಡ್-19 ಕಾರಣದಿಂದಾಗಿ ರದ್ದುಗೊಳಿಸಬೇಕು, ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವುದಕ್ಕಾಗಿ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಬೇಕು ಎಂದಿರುವ ಕೇಜ್ರಿವಾಲ್, ಆನ್ ಲೈನ್ ಪರೀಕ್ಷೆಗಳನ್ನು ನಡೆಸುವುದು ಹಾಗೂ ಇಂಟರ್ನಲ್ ಅಸೆಸ್ಮೆಂಟ್ ನ ಆಧಾರದಲ್ಲಿ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಸಲಹೆಯನ್ನು ಮುಂದಿಟ್ಟಿದ್ದಾರೆ. 

"ಈ ವರ್ಷ 6 ಲಕ್ಷ ವಿದ್ಯಾರ್ಥಿಗಳು ದೆಹಲಿಯಲ್ಲಿ ಪರೀಕ್ಷೆಗಳನ್ನು ಬರೆಯುತ್ತಿದ್ದು, ಒಂದು ಲಕ್ಷ ಬೋಧಕ ಸಿಬ್ಬಂದಿಗಳು ಪರೀಕ್ಷೆಯ ಭಾಗವಾಗಿರಲಿದ್ದಾರೆ. ದೇಶಾದ್ಯಂತ ಕೋವಿಡ್-19 ಸೋಂಕು ಪ್ರಸರಣ ಎರಡನೇ ಅಲೆಯಲ್ಲಿ ತೀವ್ರಗೊಳ್ಳುತ್ತಿದ್ದು, ಈ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳು ಕೊರೋನಾ ಹರಡುವಿಕೆಯ ಹಾಟ್ ಸ್ಪಾಟ್ ಗಳಾಗುವ ಸಾಧ್ಯತೆ ಇದೆ. ನಮಗೆ ವಿದ್ಯಾರ್ಥಿಗಳ ಆರೋಗ್ಯ, ಜೀವ ಅತ್ಯಂತ ಮುಖ್ಯವಾದದ್ದು, ಕೇಂದ್ರಕ್ಕೆ ಸಿಬಿಎಸ್ಇ ಪರೀಕ್ಷೆಗಳನ್ನು ಮುಂದೂಡುವಂತೆ ಮನವಿ ಮಾಡುತ್ತೇನೆ" ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. 

ಶಿಕ್ಷಣ ಸಚಿವಾಲಯ ಸಿಬಿಎಸ್ಇಯ 10-12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲು ಚಿಂತನೆ ನಡೆಸಿದೆ. ಈ ಸಂಬಂಧ ಏ.12 ರಂದು ಮಹತ್ವದ ಸಭೆ ನಡೆದಿತ್ತು. ಆದರೆ ರದ್ದುಗೊಳಿಸುವ ಪ್ರಸ್ತಾವನೆ ಇರಲಿಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com