ಸಿಬ್ಬಂದಿಗೆ ಕೊರೋನಾ ಸೋಂಕು; ಹೋಂ ಕ್ವಾರಂಟೈನ್‌ ನಲ್ಲಿ ಪವನ್‌ ಕಲ್ಯಾಣ್

ತಮ್ಮ ಇಬ್ಬರು ಸಿಬ್ಬಂದಿಗಳಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಜನಪ್ರಿಯ ತೆಲುಗು ಚಿತ್ರ ನಟ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಹೋಂ ಕ್ವಾರಂಟೈನ್‌ ಗೆ ಒಳಗಾಗಿದ್ದಾರೆ. 

Published: 13th April 2021 12:52 PM  |   Last Updated: 13th April 2021 12:52 PM   |  A+A-


Pawan Kalyan

ಪವನ್ ಕಲ್ಯಾಣ್

Posted By : Srinivasamurthy VN
Source : UNI

ಹೈದರಾಬಾದ್: ತಮ್ಮ ಇಬ್ಬರು ಸಿಬ್ಬಂದಿಗಳಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಜನಪ್ರಿಯ ತೆಲುಗು ಚಿತ್ರ ನಟ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಹೋಂ ಕ್ವಾರಂಟೈನ್‌ ಗೆ ಒಳಗಾಗಿದ್ದಾರೆ. 

ಪವನ್ ಕಲ್ಯಾಣ್ ಅವರ ಇಬ್ಬರು ವೈಯಕ್ತಿಕ ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿರುವುದರಿಂದ ವೈದ್ಯರ ಸೂಚನೆಯಂತೆ ಹೋಂ ಕ್ವಾರಂಟೈನ್‌ ಒಳಗಾಗಿದ್ದಾರೆ. ಈ ಸಂಬಂಧ ಜನಸೇನಾ ಪಕ್ಷ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರ ಹೆಚ್ಚಿನ ಭದ್ರತಾ ಸಿಬ್ಬಂದಿ ಹಾಗೂ ವೈಯಕ್ತಿಕ ಸಿಬ್ಬಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರ ಸಲಹೆಯಂತೆ ಈ ನಿರ್ಧಾರ ಕೈಗೊಂಡಿದ್ದಾರೆ. ಕಳೆದ ಒಂದು ವಾರದಿಂದ ಪವನ್‌ ಕಲ್ಯಾಣ್‌ ಅವರ ಒಬ್ಬೊಬ್ಬ ಸಿಬ್ಬಂದಿ ಕೊರೊನಾ  ಸೋಂಕಿಗೆ ಒಳಗಾಗಿದ್ದಾರೆ. ಅವರೆಲ್ಲರೂ ಬಹಳ ಹತ್ತಿರದ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ, ಪವನ್‌ ಕಲ್ಯಾಣ್‌ ಹೋಂ ಕ್ವಾರಂಟೈನ್‌ ಗೆ ಒಳಗಾಗಿದ್ದಾರೆ. ದೈನಂದಿನ ಕರ್ತವ್ಯಗಳನ್ನು ನಿರ್ವಹಿಸುವ ಜೊತೆಗೆ ಪಕ್ಷದ ಚಟುವಟಿಕೆಗಳನ್ನು ಪರಿಶೀಲಿಸುತ್ತಿದ್ದಾರೆ. ಪಕ್ಷದ ಮುಖಂಡರೊಂದಿಗೆ  ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡಸಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ಪವನ್ ಕಲ್ಯಾಣ್ ಅಭಿನಯದ 'ವಕಿಲ್ ಸಾಬ್' ಚಿತ್ರ ಎರಡು ದಿನಗಳ ಹಿಂದೆ ಬಿಡುಗಡೆಯಾಗಿದೆ .. ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸುವತ್ತ ದಾಪುಗಾಲು ಇರಿಸುತ್ತಿದೆ. ಮತ್ತೊಂದೆಡೆ, ಚಿತ್ರದ ನಾಯಕಿಯಾಗಿ ನಟಿಸಿದ್ದ ನಿವೇದ ಥಾಮಸ್ ಅವರಿಗೂ ಈ ತಿಂಗಳ 3 ರಂದು ಕೊರೊನಾ ಪಾಸಿಟಿವ್‌ ಇರುವುದು  ದೃಢಪಟ್ಟಿತ್ತು.


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp